ಕರಾಟೆಯಲ್ಲಿ ತಿರಂಗಾ ಅಕಾಡೆಮಿ ಸಾಧನೆ

4blh5 kkarate
Published on

ಬೈಲಹೊಂಗಲ: ಕರಾಟೆ ಇಂಡಿಯಾ ಸಂಘಟನೆ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ದಕ್ಷಿಣ ಭಾರತ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೈಲಹೊಂಗಲ ತಿರಂಗಾ ಕರಾಟೆ ಅಕಾಡೆಮಿ ವಿದ್ಯಾರ್ಥಿಗಳು ಭಾಗವಹಿಸಿ 5 ಬಂಗಾರ, 4 ಬೆಳ್ಳಿ ಹಾಗೂ 5 ಕಂಚಿನ ಪದಕ ಗೆದ್ದು ಪಟ್ಟಣದ ಹೆಮ್ಮೆ ಹೆಚ್ಚಿಸಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ಸೇರಿದಂತೆ ಐದು ರಾಜ್ಯಗಳಿಂದ ಸಾವಿರಾರು ಸ್ಪರ್ಧಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಕೌಶಲ ಪ್ರದರ್ಶಿಸಿ ಪದಕಗಳನ್ನು ಗೆದ್ದಿದ್ದಾರೆ.

ತರಬೇತುದಾರಾದ ಸುಹಾಸ ವಕ್ಕುಂದ, ಮಂಜುನಾಥ ಸುಣಗಾರ, ದೇಮು ನಾಯ್ಕರ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net