ಕೊಡಗಿನಲ್ಲಿ ಶೇ. 73 ಮತದಾನ

In Kodagu, per cent. 73 Voting
Published on

ಮಡಿಕೇರಿ:

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಕೊಡಗಿನಲ್ಲಿ ಈ ಬಾರಿ ಪ್ರಾಥಮಿಕ ಮಾಹಿತಿಗಳ ಪ್ರಕಾರ ಒಟ್ಟಾರೆ ಶೇ. 73.5ರಷ್ಟು ಮತದಾನವಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.53 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.50 ಮತದಾನವಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಶೇ. 72.5 ರಷ್ಟು ಮತದಾನವಾಗಿತ್ತು. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.75 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.70 ರಷ್ಟು ಮತದಾನ ದಾಖಲಾಗಿತ್ತು. 2014ರ ಚುನಾವಣೆಯಲ್ಲಿ ಕೊಡಗಿನಲ್ಲಿ ಶೇ. 71.88ರಷ್ಟು ಮತದಾನವಾಗಿತ್ತು. ಹಿಂದಿನ ಎರಡು ಚುನಾವಣೆಗಳಿಗೆ ಹೋಲಿಸಿದರೆ ಈ ಬಾರಿ ಕೊಡಗಿನಲ್ಲಿ ಅಲ್ಪಪ್ರಮಾಣದಲ್ಲಿ ಹೆಚ್ಚಿನ ಮತದಾನ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net