ಲೇಔಟ್‌ಗಳಲ್ಲಿ ಸೌಲಭ್ಯ ಕಲ್ಪಿಸಲು ಆದ್ಯತೆ

Manvi Nayopra
ಮಾನ್ವಿ ಪಟ್ಟಣದಲ್ಲಿ ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಗಫೂರ್‌ಸಾಬ್ ಗುರುವಾರ ಅಧಿಕಾರ ಸ್ವೀಕರಿಸಿದರು. ಸಚಿವ ಎನ್.ಎಸ್.ಬೋಸರಾಜು, ಶಾಸಕ ಹಂಪಯ್ಯ ನಾಯಕ, ಬಿ.ಕೆ.ಅಮರೇಶಪ್ಪ ಇತರರಿದ್ದರು.
Published on

ಮಾನ್ವಿ: ಪ್ರಾಧಿಕಾರದ ನಿಯಮಗಳನ್ನು ಪ್ರಾಮಾಣಿಕವಾಗಿ ಪಾಲಿಸಿ ನೂತನ ಟೌನ್ ಪ್ಲಾೃನ್‌ಗಳಿಗೆ ಮಂಜೂರಾತಿ ನೀಡಲಾಗುವುದು ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಫೂರ್‌ಸಾಬ್ ತಿಳಿಸಿದರು.

ಪಟ್ಟಣದ ನಯೋಪ್ರಾ ಕಚೇರಿಯಲ್ಲಿ ಗುರುವಾರ ನಾಮನಿರ್ದೇಶಿತ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು. ಪಟ್ಟಣದಲ್ಲಿ ಸಾಕಷ್ಟು ಲೇಔಟ್‌ಗಳಿದ್ದು, ಕ್ರಮ ಬದ್ಧವಾಗಿ ಮಾಡುವುದರ ಜತೆಗೆ ಅಗತ್ಯ ಸೌಲಭ್ಯಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಪ್ರಾಧಿಕಾರದ ನೂತನ ಸದಸ್ಯರಾಗಿ ಎಂ.ವೆಂಕಯ್ಯ ಶೆಟ್ಟಿ, ಸ್ಟೆಲ್ಲಾ ವರ್ಗೀಸ್ ವಕೀಲ, ಕನಕಪ್ಪ ಅಧಿಕಾರ ವಹಿಸಿಕೊಂಡರು. ನೂತನ ಅಧ್ಯಕ್ಷ, ಸದಸ್ಯರು ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ ಅವರನ್ನು ಸನ್ಮಾನಿಸಿದರು. ಪ್ರಾಧಿಕಾರದ ಕಾರ್ಯದರ್ಶಿ ಶರಣಪ್ಪ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net