ಮಾನ್ವಿಯಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು

manvi Street traders
ಮಾನ್ವಿ ಬಸ್ ನಿಲ್ದಾಣ ಮುಂದೆ ಬೀದಿ ಬದಿ ವ್ಯಾಪಾರಿಗಳನ್ನು ಸೋಮವಾರ ತೆರವುಗೊಳಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಬಿ.ದೇವರಮನಿ, ಪುರಸಭೆ ಆಹಾರ ನಿರೀಕ್ಷಕ ಮಹೇಶ್ ಹಾಗೂ ಸಿಬ್ಬಂದಿ ಇದ್ದರು.
Published on

ಮಾನ್ವಿ: ಪಟ್ಟಣದ ಬಸ್ ನಿಲ್ದಾಣ ಹತ್ತಿರ ರಸ್ತೆ ಬದಿ ವಾಹನ ಸಂಚಾರಕ್ಕೆ ಅಡ್ಡಿಯಾಗುವಂತೆ ತಳ್ಳುಬಂಡಿ ಹಾಗೂ ಫುಟ್‌ಪಾತ್ ಮೇಲೆ ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಪುರಸಭೆ ಸೋಮವಾರ ತೆರವುಗೊಳಿಸಿತು.

ಬಸವ ವೃತ್ತದಿಂದ ಪುರಸಭೆ ಕಚೇರಿವರೆಗೆ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ವ್ಯಾಪಾರದಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳ ಓಡಾಟಕ್ಕೆ ಸಮಸ್ಯೆಯಾಗಿತ್ತು. ಹೀಗಾಗಿ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಬಿ. ದೇವರಮನಿ ನೇತೃತ್ವದಲ್ಲಿ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು.

ಬೀದಿ ವ್ಯಾಪಾರಿಗಳು ನಿರ್ಮಿಸಿಕೊಂಡ ಗೂಡಂಗಡಿಗಳ ತೆರವುಗೊಳಿಸಲು ಮೂರ‌್ನಾಲ್ಕು ದಿನ ಅವಕಾಶ ನೀಡಲಾಗಿದ್ದು, ಖಾಲಿ ಮಾಡದಿದ್ದರೆ ಪೊಲೀಸರ ಭದ್ರತೆಯಲ್ಲಿ ತೆರವು ಮಾಡಲಾಗುವುದು ಎಂದು ಮುಖ್ಯಾಧಿಕಾರಿ ಪರಶುರಾಮ ತಿಳಿಸಿದ್ದಾರೆ. ಪುರಸಭೆ ಆಹಾರ ನಿರೀಕ್ಷಕ ಮಹೇಶ್ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net