ಮೈಸೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ತಂಪೆರೆಯುವ ಜತೆಗೆ ಅನಾಹುತವನ್ನೂ ಸೃಷ್ಟಿಸಿದೆ

19
Published on

ಮೈಸೂರು: ಬಿಸಿಲಿನ ಬೇಗುದಿಯಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಮಳೆ ತಂಪೆರೆಯುವ ಜತೆಗೆ ಅನಾಹುತವನ್ನು ಸೃಷ್ಟಿಸಿತು.

ನಗರದ ಹಲವೆಡೆ 150ಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಮುರಿದು ಬಿದ್ದು, ಅವಾಂತರ ಸೃಷ್ಟಿಯಾಯಿತು. ರಸ್ತೆಯಲ್ಲಿ ನಿಲ್ಲಿಸಿದ್ದ ಅನೇಕ ಕಾರುಗಳು ಹಾಗೂ ಬೈಕ್‌ಗಳ ಮೇಲೆ ಮರ ಬಿದ್ದ ಕಾರಣ ಜಖಂ ಗೊಂಡಿವೆ.

ಬಹುತೇಕ ಕಡೆ ನೆಲಕ್ಕುರುಳಿ ಸಂಚಾರಕ್ಕೆ ಅಡ್ಡಿಯಾಗಿದ್ದ ಮರಗಳ ಕೊಂಬೆಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಬಹುತೇಕ ಕಡೆ ವಿದ್ಯುತ್ ತಂತಿಗಳ ಮೇಲೆ ಮರಗಳ ಕೊಂಬೆ ಉರುಳಿದ ಪರಿಣಾಮ ಕೆಲಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net