

ಕೊಳ್ಳೇಗಾಲ: ಸೋಲನ್ನು ಮೆಟ್ಟಿನಿಂತಾಗಲೇ ಗೆಲ್ಲಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಂಜುಳಾ ತಿಳಿಸಿದರು.
ಶ್ರೀ ವಾಸವಿ ವಿದ್ಯಾ ಕೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಮಂಗಳವಾರ ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2024-25 ನೇ ಸಾಲಿನ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ಮಕ್ಕಳು ಕ್ರೀಡೆಯಲ್ಲಿ ಪಾಳ್ಗೊಳಬೇಕು. ಏಕೆಂದರೆ, ಕ್ರೀಡೆ ದೈಹಿಕವಾಗಿ ಸದೃಢವಾಗಿಡುವುದರ ಜತೆಗೆ ಮಾನಸಿಕವಾಗಿಯೂ ಗಟ್ಟಿಗೊಳಿಸುತ್ತದೆ. ಕ್ರೀಡೆ ಜೀವನದ ಒಂದು ಅವಿಭಾಜ್ಯ ಅಂಗ. ಇದು ಸ್ಪರ್ಧಾ ಮನೋಭಾವ ಬೆಳೆಸುತ್ತದೆ. ಈ ಕಾಲ ಘಟಕ್ಕೆ ಸ್ಪರ್ಧಿಸುವ ಪ್ರಕ್ರಿಯೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡರೆ ಏನಾದರೂ ಸಾಧನೆ ಮಾಡಬಹುದು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದು ಬಹಳ ಮುಖ್ಯ. ಹೋಬಳಿ ಮಟ್ಟದಲ್ಲಿ ಗೆದ್ದವರು ತಾಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಭಾಗವಹಿಸಬಹುದು ಎಂದರು.
ವಾಸವಿ ಶಾಲೆಯ ಕ್ರೀಡಾಪಟು ಕು.ಸುಪ್ರಿಯಾ ಮತ್ತು ಸಹ ಕ್ರೀಡಾಪಟುಗಳು, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಸಂತಕುಮಾರ್ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಬಿಆರ್‌ಸಿ ಮಹದೇವ ಕುಮಾರ್, ದೈಹಿಕ ಶಿಕ್ಷಣ ಪರೀವೀಕ್ಷಕ ಸ್ಟೀವನ್, ಹಿರಿಯ ದೈಹಿಕ ಶಿಕ್ಷಕ ವಸಂತ್ ಕುಮಾರ್, ಶ್ರೀವಾಸವಿ ವಿದ್ಯಾ ಸಂಸ್ಥೆಯ ನಿರ್ದೇಶಕ ಸಚಿನ್ ಕುಮಾರ್, ವೆಂಕಟೇಶ್ ಬಾಬು, ವಾಸವಿ ಶಾಲೆ ಮುಖ್ಯ ಶಿಕ್ಷಕಿ ಬಿ.ಎಸ್.ಗೀತಾ ಇತರರದ್ದರು.