

ರಾಮದುರ್ಗ: ಗಣೇಶ ಹಬ್ಬವನ್ನು ಶಾಂತಿ, ಸಹಬಾಳ್ವೆಯಿಂದ ಆಚರಿಸಬೇಕು ಎಂದು ಡಿವೈಎಸ್‌ಪಿ ಎಂ. ಪಾಂಡುರಂಗಯ್ಯ ಹೇಳಿದರು.
ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಶಾಂತಿಸಭೆಯಲ್ಲಿ ಮಾತನಾಡಿದರು. ಹಬ್ಬದ ನೆಪದಲ್ಲಿ ಅಶ್ಲೀಲ ಮನರಂಜನೆ ಮತ್ತು ಪ್ರಚೋದಿಸುವ ಹಾಡುಗಳಿಗೆ ಅವಕಾಶ ಇಲ್ಲ. ಒಂದು ವೇಳೆ ಕಾನೂನು ಉಲ್ಲಂಸಿದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸಿಪಿಐ ಐ.ಆರ್. ಪಟ್ಟಣಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಗ್ರೇಡ್2 ತಹಸೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ, ತಾಪಂ ಇಒ ಪ್ರವೀಣಕುಮಾರ ಸಾಲಿ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ, ಪಿಎಸ್‌ಐ ಸುನೀಲಕುಮಾರ ನಾಯ್ಕ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕ ಗಣೇಶ ಪ್ರತಿಷ್ಠಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.