ಶಾಲೆ-ಕಾಲೇಜುಗಳಲ್ಲಿ ಉಪನ್ಯಾಸ

23 MANVI 02
ಮಾನ್ವಿ ತಹಸಿಲ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಿಸಲಾಯಿತು. ತಹಸೀಲ್ದಾರ್ ರಾಜು ಪಿರಂಗಿ, ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ಹರಿಹರ ಪಾಟೀಲ್, ಮುಖಂಡರಾದ ಶ್ರೀಧರಸ್ವಾಮಿ, ತಾಯಪ್ಪ ಬಿ.ಹೊಸೂರ, ಗುಮ್ಮ ಬಸವರಾಜ ವಕೀಲ ಇತರರಿದ್ದರು.
Published on

ಮಾನ್ವಿ: ವೀರರಾಣಿ ಕಿತ್ತೂರು ಚನ್ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಜಯಗಳಿಸಿದ ವೀರ ವನಿತೆಯ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ತಹಸೀಲ್ದಾರ್ ರಾಜು ಪಿರಂಗಿ ಹೇಳಿದರು. ಪಟ್ಟಣದ ತಹಸಿಲ್ ಕಚೇರಿಯಲ್ಲಿ ಬುಧವಾರ ತಾಲೂಕು ಆಡಳಿತ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಕಿತ್ತೂರು ಚನ್ನಮ್ಮ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಡಿನ ಅನೇಕ ಮಹಿಳೆಯರು ಸಾಧನೆಗಳ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ತಾಲೂಕಿನ ವಿವಿಧ

ಶಾಲೆ-ಕಾಲೇಜು ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮಗಳನ್ನು ತಾಲೂಕು ಆಡಳಿತದ ವತಿಯಿಂದ ಅಯೋಜಿಸಲಾಗುವುದು ಎಂದು ತಿಳಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಅರುಣಕುಮಾರ ಚಂದ, ಪ್ರಮುಖರಾದ ಜಗದೀಶ ಓತ್ತೂರ್, ಶಿವಲಿಂಗಯ್ಯಸ್ವಾಮಿ, ಹೊಯ್ಸಳಸ್ವಾಮಿ, ವೀರನಗೌಡ ವಕೀಲ, ಉಮೇಶಸ್ವಾಮಿ, ಶರಣಪ್ಪ ಹರವಿ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net