ಸಿಂಧನೂರಿನಲ್ಲಿ ಗುಣಮಟ್ಟದ ಶಿಕ್ಷಣ

29 SND 06
ಸಿಂಧನೂರು ನಗರದಲ್ಲಿ ಅಯ್ಯಮ್ಮ ಭೀಮನಗೌಡ ಬಾದರ್ಲಿ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ ಶಿಕ್ಷಕರ ದಿನಾಚರಣೆ, ಗುರು ಮಹಾಸಂಗಮ-2024 ಹಾಗೂ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸಾಹಿತಿ ಸಿದ್ದು ಯಾಪಲಪರ್ವಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಎಂಎಲ್‌ಸಿ ಬಸನಗೌಡ ಬಾದರ್ಲಿ, ಪ್ರಭಾರ ಬಿಇಒ ವಾಜಿದ್ ಮಜೀದ್, ಸಮನ್ವಯಾಧಿಕಾರಿ ಬಸಲಿಂಗಪ್ಪ, ಚಂದ್ರಶೇಖರ ಹಿರೇಮಠ್, ವೆಂಕನಗೌಡ ವಟಗಲ್, ಗಂಗನಗೌಡ ಪೊಲೀಸ್ ಪಾಟೀಲ್ ಇದ್ದರು.
Published on

ಸಿಂಧನೂರು: ಶೈಕ್ಷಣಿಕ ಹಬ್ ಆಗಿ ಸಿಂಧನೂರು ಪರಿವರ್ತನೆಯಾಗುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸಾಹಿತಿ ಸಿದ್ದು ಯಾಪಲಪರ್ವಿ ಹೇಳಿದರು.

ನಗರದಲ್ಲಿ ಅಯ್ಯಮ್ಮ ಭೀಮನಗೌಡ ಬಾದರ್ಲಿ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್, ಬಸನಗೌಡ ಬಾದರ್ಲಿ ಫೌಂಡೇಷನ್ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಗುರು ಮಹಾಸಂಗಮ-2024 ಹಾಗೂ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಈ ಹಿಂದೆ ತಾಲೂಕಿನ ವಿದ್ಯಾರ್ಥಿಗಳು ವಿವಿಧ ಭಾಗಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆಯುತ್ತಿದ್ದರು. ಈಗ ಸಿಂಧನೂರಿನಲ್ಲಿಯೇ ಮೌಲ್ಯಯುತ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿವೆ ಎಂದರು.

ಎಂಎಲ್‌ಸಿ ಬಸನಗೌಡ ಬಾದರ್ಲಿ ಮಾತನಾಡಿ, ಸಿಂಧನೂರು ಜಿಲ್ಲೆಯನ್ನು ಮಾದರಿ ಶೈಕ್ಷಣಿಕ ಜಿಲ್ಲೆಯನ್ನಾಗಿ ಮಾಡುವುದು ನನ್ನ ಮೊದಲ ಆದ್ಯತೆ. ತಾಲೂಕಿನ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಸುಸಜ್ಜಿತ ಶಿಕ್ಷಣ ಸಂಸ್ಥೆಗಳನ್ನಾಗಿ ಮಾಡುವುದು ಪ್ರತಿ ತರಗತಿಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್‌ಗಳನ್ನು ಅಳವಡಿಸುವುದು. ಒಳ್ಳೆಯ ಸುಸಜ್ಜಿತ ಗ್ರಂಥಾಲಯವನ್ನು ತೆರೆಯಲು ಕ್ರಮ ವಹಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮನಗೌಡ ಬಾದರ್ಲಿ ವಹಿಸಿದ್ದರು. ಪ್ರಮುಖರಾದ ಶಿವಕುಮಾರ ಜವಳಿ, ವೆಂಕಟೇಶ ರಾಗಲಪರ್ವಿ, ಯಂಕನಗೌಡ ಗಿಣಿವಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net