ಕ್ರೀಡೆಗಳಲ್ಲಿ ಪಾಲ್ಗೊಂಡರೆ ಆರೋಗ್ಯ ಉತ್ತಮ

web3
ಗೋಕಾಕ ನಗರದಲ್ಲಿ ಹಮ್ಮಿಕೊಂಡಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಖೋಖೋ ಹಾಗೂ ಸೈಕ್ಲಿಂಗ್ ಪಂದ್ಯಾವಳಿಗೆ ಕ್ರೀಡಾ ಜ್ಯೋತಿ ಬರಮಾಡಿಕೊಳ್ಳುವ ಮೂಲಕ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸಿದರು. ಸಂಜೀವ ಸಂಸುದ್ದಿ, ಎಲ್.ಕೆ.ತೋರಣಗಟ್ಟಿ, ಬಿ.ಕೆ. ಕುಲಕರ್ಣಿ, ಅರುಣ ಪೂಜೇರ ಇತರರಿದ್ದರು.
Published on

ಗೋಕಾಕ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಹೇಳಿದರು.

ನಗರದ ಲಕ್ಷ್ಮೀ ಎಜುಕೇಷನ್ ಟ್ರಸ್ಟ್‌ನ ಕ್ರೀಡಾಂಗಣದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಚಿಕ್ಕೋಡಿ ಹಾಗೂ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಖೋಖೋ ಹಾಗೂ ಸೈಕ್ಲಿಂಗ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ದೈಹಿಕ ಶಿಕ್ಷಣಾಧಿಕಾರಿ ಎಲ್.ಕೆ.ತೋರಣಗಟ್ಟಿ, ಆಡಳಿತಾಧಿಕಾರಿ ಬಿ.ಕೆ. ಕುಲಕರ್ಣಿ, ಪ್ರಾಚಾರ್ಯ ಅರುಣ ಪೂಜೇರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net