ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಿ

Kudlgi Scouts
ಕೂಡ್ಲಿಗಿಯ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾವೇಶವನ್ನು ಬಿಇಒ ಪದ್ಮನಾಭ ಕರಣಂ ಉದ್ಘಾಟಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ಮಂಜುನಾಥ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಮಲ್ಲೇಶ್ವರಿ ಜುಜಾರೆ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್ ಇತರರಿದ್ದರು.
Published on

ಕೂಡ್ಲಿಗಿ: ಪ್ರಾಥಮಿಕ ಹಂತದಲ್ಲೇ ಮಕ್ಕಳು ದೇಶಪ್ರೇಮ ಮತ್ತು ಶಿಸ್ತನ್ನು ಬೆಳೆಸಿಕೊಳ್ಳಬೇಕು ಎಂದು ಬಿಇಒ ಪದ್ಮನಾಭ ಕರಣಂ ಹೇಳಿದರು.

ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಭಾರತದ ಆಸ್ತಿಗಳಾದ ವಿದ್ಯಾರ್ಥಿಗಳಿಗೆ ದೇಶಪ್ರೇಮ, ಪ್ರಕೃತಿ ಪ್ರೇಮ, ರಾಷ್ಟ್ರೀಯ ಭಾವೈಕ್ಯತೆ ಮತ್ತು ದಿಟ್ಟ ನಾಯಕತ್ವವನ್ನು ಮೂಡಿಸುವಲ್ಲಿ ಶಿಕ್ಷಕರು ಮುಂದಾಗಬೇಕು. ವಿದ್ಯಾರ್ಥಿಗಳು ಸ್ಕೌಟ್ಸ್-ಗೈಡ್ಸ್ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು. ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಸ್ಕೌಟ್ಸ್-ಗೈಡ್ಸ್ ಸಹಕಾರಿಯಾಗಲಿದೆ ಎಂದರು.

ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ಮಂಜುನಾಥ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಮಲ್ಲೇಶ್ವರಿ ಜುಜಾರೆ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಬಿ. ಶಿವಾನಂದ, ಸ್ಕೌಟ್ಸ್-ಗೈಡ್ಸ್ ತಾಲೂಕು ಕಾರ್ಯದರ್ಶಿ ಟಿ.ತಿಂದಪ್ಪ, ಶಿವಪುರಸ್ವಾಮಿ, ಖಜಾಂಚಿ ವಿ.ಹನುಮೇಶ್, ಜಿಲ್ಲಾ ತರಬೇತಿ ಆಯುಕ್ತೆ ರೇಣುಕಾ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net