ಬಜೆಟ್ ನಲ್ಲಿ 24,005 ಗುತ್ತಿಗೆ ಕಾರ್ಮಿಕರನ್ನು ಖಾಯಂ ಮಾಡುವುದಾಗಿ ಘೋಷಣೆ

loka election
cong, jds, bjp
Published on


ಮೈಸೂರು: ನಗರದ ಪೌರಕಾರ್ಮಿಕರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಮನವಿ ಮಾಡಿದರು.

ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಪೌರಕಾರ್ಮಿಕರಿಗೆ 9 ಸಾವಿರ ವೇತನ ನೀಡಲಾಗುತ್ತದೆ. ಆದರೆ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 17 ಸಾವಿರಕ್ಕೆ ಹೆಚ್ಚಳ ಮಾಡಿದ್ದಾರೆ. ಅಲ್ಲದೆ, ಬಜೆಟ್ ನಲ್ಲಿ 24,005 ಗುತ್ತಿಗೆ ಕಾರ್ಮಿಕರನ್ನು ಖಾಯಂ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಎಸ್.ಸಿ.ಪಿ, ಟಿ.ಎಸ್.ಪಿ ಹಣದಲ್ಲೂ ಪೌರಕಾರ್ಮಿಕರ ಅಭಿವೃದ್ಧಿಗೆ ಶೇ. 20.1 ರಷ್ಟು ಮೀಸಲಿರಿಸಿದ್ದಾರೆ. ಕಾಂಗ್ರೆಸ್ ಗೆಲುವಿನಿಂದ ಮಾತ್ರ ನಮ್ಮ ಪ್ರಗತಿ ಸಾಧ್ಯ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖಂಡರಾದ ಆರ್ಟಿಸ್ಟ್ ನಾಗರಾಜು, ಆರ್.ದಾಸ್, ಯತಿರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net