ಸಮುದಾಯದಲ್ಲಿ ಬೆರೆಯುವುದೇ ಎನ್‌ಎಸ್‌ಎಸ್

24npn1-Web
ಎನ್‌ಎಸ್‌ಎಸ್ ದಿನಾಚರಣೆ ಅಂಗವಾಗಿ ನಿಪ್ಪಾಣಿಯ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಡಾ. ಕೆ.ಬಿ. ಜಗದೀಶಗೌಡ, ಪ್ರೊ. ಪ್ರಶಾಂತ ಹೆಬ್ಬಾಳೆ ಮತ್ತು ಸಿಬ್ಬಂದಿ ಇದ್ದಾರೆ.
Published on

ನಿಪ್ಪಾಣಿ: ವಿದ್ಯಾರ್ಥಿಗಳು ಪಾಠದ ಜತೆ ಸಮುದಾಯದ ಜನರೊಂದಿಗೆ ಬೆರೆತು, ಅವರ ನೋವು- ನಲಿವು, ಸುಖ-ದುಃಖಗಳಲ್ಲಿ ಪಾಲ್ಗೊಳ್ಳುವುದೇ ರಾಷ್ಟ್ರೀಯ ಸೇವಾ ಯೋಜನೆಯ ಮೂಲ ಉದ್ದೇಶವಾಗಿದೆ ಎಂದು ಪ್ರಾಚಾರ್ಯ ಡಾ. ಕೆ.ಬಿ. ಜಗದೀಶಗೌಡ ಹೇಳಿದರು.

ಸ್ಥಳೀಯ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ (ವಿಎಸ್‌ಎಂಎಸ್‌ಆರ್‌ಕೆಐಟಿ)ದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ ಯೋಜನೆಯನ್ನು ಆರಂಭಿಸಲಾಗಿದೆ. ವಿದ್ಯಾರ್ಥಿ ಮತ್ತು ಸಮುದಾಯದ ನಡುವೆ ಸುಖಕರವಾದ ಮತ್ತು ರಚನಾತ್ಮಕ ಸಂಬಂಧ ಬೆಳೆಯಬೇಕೆಂಬ ಆಶಯವನ್ನು ಎನ್‌ಎಸ್‌ಎಸ್ ಹೊಂದಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರೀಯ ಸೇವಾ ಯೋಜನೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮಹಾವಿದ್ಯಾಲಯ ಸಿಬ್ಬಂದಿ ನೇರವಾಗಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಭಾಗವಹಿಸಿದ್ದರು. ಎನ್‌ಎಸ್‌ಎಸ್ ಸಂಯೋಜಕ ಪ್ರೊ. ಪ್ರಶಾಂತ ಹೆಬ್ಬಾಳೆ ಪ್ರತಿಜ್ಞಾವಿಧಿ ಬೋಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net