

ಬೆಳಗಾವಿ: ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕರೊನಾ ಆರ್ಭಟ ಮತ್ತೆ ಶುರುವಾಗಿದೆ. ಗುರುವಾರ ಜಿಲ್ಲೆಯಲ್ಲಿ 46 ಕರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಬೆಳಗಾವಿ ನಗರ ಹಾಗೂ ಗ್ರಾಮೀಣದಲ್ಲಿ 17, ಅಥಣಿ 7, ಗೋಕಾಕ, ರಾಮದುರ್ಗ ತಲಾ 6, ಚಿಕ್ಕೋಡಿ ಹಾಗೂ ಹೊರ ಜಿಲ್ಲೆಯ ತಲಾ 4, ಹುಕ್ಕೇರಿ, ಖಾನಾಪುರದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 27,460ಕ್ಕೆ ಏರಿಕೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟಾರೆ 26,865 ಕರೊನಾ ಸೋಂಕಿತರು ಗುಣಮುಖರಾಗಿದ್ದಾರೆ. 151 ಸಕ್ರಿಯ ಪ್ರಕರಣಗಳಿವೆ.
3,079 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.