ಜಿಲ್ಲೆಯಲ್ಲಿ ಕರೊನಾದಿಂದ 344 ಜನ ಗುಣಮುಖ

China- corona vaccine
Published on

ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರ ಕರೊನಾ ಸೋಂಕಿನಿಂದ 344 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 14,434ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ಗುರುವಾರ 42 ವರ್ಷದ ಪುರುಷ, 64 ವರ್ಷ ವೃದ್ಧೆ, 63 ಮತ್ತು 66 ವರ್ಷದ ವೃದ್ಧರು ಮೃತಪಟ್ಟಿದ್ದಾರೆ. ಅಲ್ಲದೆ, ಹೊಸದಾಗಿ 295 ಜನರಿಗೆ ಸೋಂಕು ದೃಢಪಟ್ಟಿದೆ.

ಒಟ್ಟು ಸೋಂಕಿತರ ಸಂಖ್ಯೆ 17,338ಕ್ಕೆ ಏರಿದ್ದು, 2,655 ಜನರು ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net