

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿದ್ದರೂ ಅಂತರ್ಜಲ ಮಟ್ಟ ಕುಸಿತದಿಂದ ನೀರಿನ ಸಮಸ್ಯೆ ಉಂಟಾಗುತ್ತಿದೆ. ಕೊಳವೆಬಾವಿಗಳು ಬತ್ತುತ್ತಿವೆ. ಇದಕ್ಕೆ ಕಾರಣ ನಮ್ಮಲ್ಲಿ ಜಲಸಾರತೆ ಕಡಿಮೆ ಇರುವುದು. ಹೀಗಾಗಿ ಜಿಲ್ಲೆಯಲ್ಲಿ ಜಲ ಸಂರಣದ ಆಂದೋಲನವನ್ನು ಒಂದು ಗ್ರಾಮ ಒಂದು ಕೆರೆ ಯೋಜನೆ ಮೂಲಕ ಮಾಡಲಾಗುತ್ತದೆ ಎಂದು ಜಿಲ್ಲಾ ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯೆ ದಿವ್ಯ ಪ್ರಭು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಕೆರೆಗಳ ಸಂರಣೆ ಹಾಗೂ ಜಿಲ್ಲಾ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 1206 ಕೆರೆಗಳಿವೆ. ಪ್ರತಿ ವರ್ಷ ವಿವಿಧ ಇಲಾಖೆಗಳಿಂದ ಹೂಳೆತ್ತುವ, ಬಂಡು ಕಟ್ಟುವ ಕಾಮಗಾರಿ ಮಾಡಲಾಗುತ್ತದೆ. ಆದರೆ ಅದರ ಪ್ರತಿಲ ಕಾಣುತ್ತಿಲ್ಲ. ವಿವಿಧ ಇಲಾಖೆಗಳ ಪರಸ್ಪರ ಸಮನ್ವಯದ ಕೊರತೆ ಮತ್ತು ಸಮಗ್ರ ಅಭಿವೃದ್ಧಿ ಕುರಿತ ಆಲೋಚನೆ ಇಲ್ಲದಿರುವುದು, ಕೆರೆಗಳ ಅಭಿವೃದ್ಧಿಗೆ ಹಿನ್ನಡೆ ಆಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಪ್ರತಿ ಗ್ರಾಮಕ್ಕೆ ಒಂದು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತದಿಂದ ಒಂದು ಗ್ರಾಮ&ಒಂದು ಕೆರೆ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಿದ್ದು, ಶ್ರೀದಲ್ಲಿ ಯೋಜನೆ ಆರಂಭಿಸಲಾಗುವುದು. ಹಂತ ಹಂತವಾಗಿ ಕೆರೆಗಳನ್ನು ಯೋಜನೆಗೆ ಒಳಪಡಿಸಲಾಗುವುದು. ಜಿಪಂ ಉಪಕಾರ್ಯದಶಿರ್ಗಳು ಈ ಕುರಿತು ಸ್ಪಷ್ಟ ಮಾಹಿತಿ ಮತ್ತು ನೀಲನೆಯೊಂದಿಗೆ ಮುಂದಿನ ಸಭೆಯೊಳಗೆ ಕ್ರಿಯಾಯೋಜನೆ ಸಲ್ಲಿಸಬೇಕು ಎಂದರು.
ಈಗಾಗಲೇ ಜಿಲ್ಲೆಯ ಎಲ್ಲ ಕೆರೆಗಳ ಸರ್ವೇ ಮಾಡಿ ಅತಿಕ್ರಮಣ ಗುರತಿಸಲಾಗಿದೆ. ಅಗತ್ಯವಿದ್ದಲ್ಲಿ ಒತ್ತುವರಿ ತೆರವುಗೊಳಿಸುವುದು, ಕೆರೆಗಳ ಮಾಲೀಕತ್ವ ಹೊಂದಿರುವ ಆಯಾ ಇಲಾಖೆ ಅಧಿಕಾರಿಗಳ ಜವಾಬ್ದಾರಿ. ಕಾನೂನುಬಾಹಿರವಾಗಿ ಕೆರೆ ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿಷ್ಕಾಳಜಿ ತೋರಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎ್.ದೊಡ್ಡಮನಿ ಮಾತನಾಡಿದರು. ಜಿಪಂ ಉಪ ಕಾರ್ಯದಶಿರ್ ವಿಜಯಕುಮಾರ ಆಜೂರ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕ ಮೋಹನ ಶಿವಣ್ಣನವರ, ಮಹಾನಗರ ಪಾಲಿಕೆ ಅಧೀಕ್ಷಕ ತಿಮ್ಮಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಬಿ.ಎಸ್., ಜಿಲ್ಲಾ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಇತರರು ಇದ್ದರು.