ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ

447
Published on

ಅಥಣಿ: ಪಟ್ಟಣದ ಹೊರವಲಯದಲ್ಲಿರುವ ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಮಶಿನ್ ಮತ್ತು ರಿಪೇರಿ ಮಾಡುವ ಪರಿಕರಗಳು ಬೆಂಕಿಗೆ ಆಹುತಿಯಾದ ಘಟನೆ ಗುರುವಾರ ಸಂಭವಿಸಿದೆ. ಪಟ್ಟಣದ ರೇಣುಕಾ ದೇವಸ್ಥಾನ ಸಮೀಪದ ಸದಾಶಿವ ಶ್ರೀಪಾದ ಗೌಳಿ ಎಂಬುವರಿಗೆ ಈ ಗ್ಯಾರೇಜ್ ಸೇರಿದೆ.

ಘಟನೆಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net