ಲೋಂಡಾದಲ್ಲಿ ವೈನ್‌ಶಾಪ್‌ಗೆ ಬೆಂಕಿ

01
Published on

ಖಾನಾಪುರ: ತಾಲೂಕಿನ ಲೋಂಡಾ ಗ್ರಾಮದಲ್ಲಿ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ಪರಿಣಾಮ ಇಡೀ ಮದ್ಯದಂಗಡಿ ಸುಟ್ಟು ಕರಕಲಾದ ಘಟನೆ ಬುಧವಾರ ರಾತ್ರಿ ವರದಿಯಾಗಿದೆ.

ಘಟನೆಯಲ್ಲಿ ಮದ್ಯದಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಮದ್ಯ ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಖಾನಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ಹತೋಟಿಗೆ ತರಲು ಯತ್ನಿಸಿದರು. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net