

ಮಡಿಕೇರಿ
ಯು.ಎಸ್.ಎ.ಯ ಸ್ಟಾ÷್ಯನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ. ಮಂಜುನಾಥರವರು ಸತತ ಐದನೇ ಬಾರಿ ಸ್ಥಾನ ಪಡೆದಿದ್ದಾರೆ. ಮಡಿಕೇರಿ ಫೀಲ್ಡ್ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಸಾಯನಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ಅವರು “Analytical Chemistry and Energy” ವಿಷಯಗಳಲ್ಲಿ ಅಂತರಾಷ್ಟಿçÃಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದ್ದಾರೆ.
ಇವರು 194 ಅಂತರರಾಷ್ಟಿçÃಯ ಲೇಖನಗಳನ್ನು ಅತ್ಯಂತ ಪ್ರತಿಷ್ಟಿತ ಜರ್ನಲ್‌ಗಳಲ್ಲಿ ಪ್ರಕಟಿಸಿದ್ದು, 25 ಪುಸ್ತಕಗಳನ್ನು ಹೊರತಂದಿರುತ್ತಾರೆ. 27 ಜರ್ನಲ್‌ಗಳಲ್ಲಿ ಎಡಿಟೋರಿಯಲ್ ಬೋರ್ಡ್ಮೆಂಬರ್ ಆಗಿಯೂ ಹಾಗೂ Sensing technology (Taylor and francis)ಜರ್ನಲ್‌ನ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ.