ಬೆಳಗಾವಿಯಲ್ಲಿ ಧಗಧಗ ಉರಿದ ಚಲಿಸುತ್ತಿದ್ದ ಕಾರು

0101
Published on

ಬೆಳಗಾವಿ: ನಗರದ ಕ್ಯಾಂಪ್ ಪ್ರದೇಶದಲ್ಲಿ ಚಲಿಸುತ್ತಿದ್ದ ಇಂಡಿಕಾ ಕಾರಿಗೆ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿಯಿತು. ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಬೆಂಕಿ ಹೊತ್ತಿ ಧಗಧಗ ಉರಿಯುತ್ತಿದ್ದ ದೃಶ್ಯ ಕಂಡು ಬೆಚ್ಚಿಬಿದ್ದರು.

ಕ್ಯಾಂಪ್ ಪ್ರದೇಶದಲ್ಲಿ ಹೋಗುತ್ತಿರುವ ಸಂದರ್ಭ ಕಾರಿನಲ್ಲಿನ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಚಾಲಕನು ಮಿಲಿಟರಿ ಆಸ್ಪತ್ರೆಯ ಬಳಿ ಕಾರ್ ನಿಲ್ಲಿಸಿದ್ದಾನೆ. ಬಳಿಕ ಕಾರಿಗೆ ಸಂಪೂರ್ಣ ಬೆಂಕಿ ಆವರಿಸಿಕೊಂಡಿದೆ. ಅಲ್ವ ಸ್ವಲ್ಪ ಗಾಯಗೊಂಡಿದ್ದ ಕಾರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬೆಳಗಾವಿ ಸಂಚಾರಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net