

ಚಿಕ್ಕೋಡಿ: ಕಾಂಗ್ರೆಸ್ ಬರುವ ದಿನಗಳಲ್ಲಿ ಪಕ್ಷಕ್ಕಾಗಿ ದುಡಿಯುವ ಸಾಮಾನ್ಯ ಕಾರ್ಯಕರ್ತರಿಗೂ ಉತ್ತಮ ಅವಕಾಶ ನೀಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಸೋಮವಾರ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ, ಕಾಂಗ್ರೆಸ್‌ನಲ್ಲಿ ಪ್ರಾಮಾಣಿಕವಾಗಿ ದುಡಿಯುವವರನ್ನು ಗುರುತಿಸಿ ಅವರಿಗೆ ತರಬೇತಿ ನೀಡಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪಕ್ಷ ಕಟ್ಟಲು ಬಳಸಿಕೊಳ್ಳಲಾಗುವುದು.
ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಬೇರು ಮಟ್ಟದಿಂದ ಕಟ್ಟಲಾಗುವುದು ಎಂದರು. ಮಾಜಿ ಸಚಿವ ವೀರಕುಮಾರ್ ಪಾಟೀಲ, ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮಾಜಿ ಶಾ ಕ ರಾದ ಶ್ಯಾಮ ಘಾಟಗೆ, ಕಾಕಾಸಾಹೇಬ ಪಾಟೀಲ, ಮಹಿಳಾ ಘಟಕದ ಅಧ್ಯಕ್ಷೆ ತೇಜಸ್ವಿನಿ ನಾಯಿಕವಾಡಿ, ಮುಖಂಡರಾದ ಮಹಾವೀರ ಮೋಹಿತೆ, ಶ್ಯಾಮ ರೇವಡೆ, ಸದಾಶಿವ ಬುಟಾಳಿ, ಸತೀಶ ಕುಲಕರ್ಣಿ, ಪ್ರಭಾಕರ ಕೋರೆ, ಪಂಕಜ ಪಾಟೀಲ, ರೇವಗೌಡ ಪಾಟೀಲ, ಎಚ್.ಎಸ್. ನಸಲಾಪುರೆ ಮತ್ತಿತರರು ಉಪಸ್ಥಿತರಿದ್ದರು.