ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ.85 ರಿಂದ 90ರಷ್ಟು ಒಕ್ಕಲಿಗರರು ಮೈತ್ರಿ ಪರವಾಗಿದ್ದಾರೆ

HDK_DKS
Published on

ಮೈಸೂರು: ಜಿಲ್ಲೆಯಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರಿಂದ ಒಕ್ಕಲಿಗರಿಗೆ ರಕ್ಷಣೆ ಸಿಕ್ಕಿಲ್ಲ, ಅವರಿಂದ ಅನ್ಯಾಯವಾಗಿದೆ ಎಂಬುದನ್ನು ಡಿ.ಕೆ. ಶಿವಕುಮಾರ್ ಅವರೇ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರಿಗೆ ಅವರ ಪಕ್ಷದ ಮುಖ್ಯಮಂತ್ರಿಯಿಂದಲೇ ಅನ್ಯಾಯವಾಗಿದೆ ಅನ್ನೋದು ಶಿವಕುಮಾರ್ ಅವರ ಮಾತಿನ ಅರ್ಥ. ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವತ್ತಿಗೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿಯಾಗಲು ಅಡ್ಡಿಯಾಗುತ್ತಾರೆ ಎಂಬ ಕಾರಣಕ್ಕೆ ಡಾ.ಜಿ. ಪರಮೇಶ್ವರ್ ಅವರನ್ನೇ ಸೋಲಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೆ ಇದ್ದರೆ ಬಿಜೆಪಿಗೆ ಹೋಗುತ್ತೇನೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಸಿದ್ದರಾಮಯ್ಯ ಬೆದರಿಸಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ.85 ರಿಂದ 90ರಷ್ಟು ಒಕ್ಕಲಿಗರರು ಮೈತ್ರಿ ಪರವಾಗಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net