ಉಗರಗೋಳದಲ್ಲಿ ಪಿಯು ಕಾಲೇಜು ಆರಂಭ

web7
ಉಗರಗೋಳದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು. ಎಂ.ಆರ್.ಹಿರೇಮಠ, ಉಮೇಶ್ವರ ಶಿವಾಚಾರ್ಯರು, ಮಂಜುನಾಥ ಕಾಳಪ್ಪನವರ, ಮಲ್ಲಿಕಾರ್ಜುನ ಹೆಗ್ಗನ್ನವರ ಇತರರಿದ್ದರು.
Published on

ಉಗರಗೋಳ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಉಗರಗೋಳದಲ್ಲಿ ಪಿಯು ಕಾಲೇಜು ಆರಂಭಿಸಲಾಗುವುದು. ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಪಿಯು ತರಗತಿ ಆರಂಭಕ್ಕೆ ಕ್ರಮವಹಿಸಲಾಗುವುದು ಎಂದು ಶಾಸಕ ವಿಶ್ವಾಸ ವೈದ್ಯ ಭರವಸೆ ನೀಡಿದರು.

ಗ್ರಾಮದ ಗುರುಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ಜಾತ್ರೆ ಪ್ರಯುಕ್ತ ಸೋಮವಾರ ಹಮ್ಮಿಕೊಂಡಿದ್ದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಗರಗೋಳ ಹಾಗೂ ಸುತ್ತಲಿನ ಗ್ರಾಮಗಳ ರೈತರಿಗೆ ನೀರಾವರಿ ಸೌಕರ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು. 205 ಕೋಟಿ ರೂ. ವೆಚ್ಚದಲ್ಲಿ ಸವದತ್ತಿ ತಾಲೂಕಿನ 17 ಕೆರೆಗಳನ್ನು ಮಲಪ್ರಭಾ ನದಿಯಿಂದ ತುಂಬಿಸಲಾಗುವುದು ಎಂದು ಹೇಳಿದರು.

ಉಗರಗೋಳ ಗ್ರಾಮಕ್ಕೆ ಬೇಕಾಗುವ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು. ಗುರು ಶಿವಪ್ಪಯ್ಯ ಶಿವಯೋಗಿಗಳ ಮಠ ಸಮಾಜಮುಖಿ ಕಾಯಕದಲ್ಲಿ ತೊಡಗಿದೆ. ಮಠಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಮಠದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ಹಿರೇಮಠ ಮಾತನಾಡಿ, ಉಗರಗೋಳ ರೈತರಿಗೆ ನೆರವಾಗುವ ದಷ್ಟಿಯಿಂದ ಇಲ್ಲಿ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಹೂಲಿಯ ಸಾಂಬಯ್ಯನವರ ಮಠದ ಉಮೇಶ್ವರ ಶಿವಾಚಾರ್ಯ ಶ್ರೀಗಳು, ಉಗರಗೋಳದ ನಿರ್ವಾಣೇಶ್ವರ ಮಠದ ಮಹಾಂತ ಸ್ವಾಮೀಜಿ, ಬ್ರಹ್ಮಾರೂಢ ಮಠದ ಬ್ರಹ್ಮಾರೂಢ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಾಧಕ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಅರ್ಜುನ ವಠಾರ ಹಾಗೂ ಸಂಗಡಿಗರು ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸಿದರು.

ಗ್ರಾಪಂ ಅಧ್ಯಕ್ಷ ಮಂಜುನಾಥ ಕಾಳಪ್ಪನವರ, ಉಪಾಧ್ಯಕ್ಷೆ ರೇಣವ್ವ ಸಿದ್ದಕ್ಕನವರ, ಬಸನಗೌಡ ಪಾಟೀಲ, ಸಿದ್ದನಗೌಡ ಗೂಡ್ರಾಶಿ, ಜೈಶಂಕರ, ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಸವದತ್ತಿ ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಮುತ್ತಿನ, ಮಲ್ಲು ಜಕಾತಿ, ಚಂದ್ರು ಶಾಮನೂರ, ಮಂಜು ಪಾಚಂಗಿ, ಮಾರುತಿ ಕುಂಟೋಜಿ, ಶಾಂತವೀರಯ್ಯ ಗದುಗಿನಹಿರೇಮಠ, ಎಸ್.ಎಲ್.ಯಲಿಗಾರ, ಪರಸಪ್ಪ ಇಮ್ರಾಪುರ, ಇಮಾಮಹುಸೇನ್ ಗೂಡುನವರ, ಮಾರುತಿ ಶಿಂಧೆ, ಶಶಿಧರ ಅಂಗಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net