ವಿಜಯೋತ್ಸವದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು

hnsr
ಹನುಮಸಾಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ತಾಲೂಕು ಅಧ್ಯಕ್ಷ ಬಸವರಾಜ ಹಳ್ಳೂರು, ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಮಹಾಂತೇಶ ಕುಷ್ಟಗಿ, ಮುಖಂಡರಾದ ನಾಗರಾಜ ಕಂದಗಲ, ಸಕ್ರಪ್ಪ ಬಿಂಗಿ, ವಿಶ್ವನಾಥ ನಾಗೂರು, ಮರೆಗೌಡ ಭೂದೂರು, ಬಸವರಾಜ ಬಿಲ್ಕಾರ, ಬಸವರಾಜ ದ್ಯಾವಣ್ಣವರ, ರಮೇಶ ಬಡಿಗೇರ, ಚಂದ್ರು ಬೇಳಗಲ್ ಇತರರಿದ್ದರು.
Published on

ಹನುಮಸಾಗರ: ಪ್ರಧಾನಿ ನರೇಂದ್ರ ಮೋದಿಯವರ ಜನಪರ ಕಾರ್ಯಕ್ರಮಗಳಿಂದ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಬಸವರಾಜ ಹಳ್ಳೂರು ಹೇಳಿದರು.


ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದಕ್ಕಾಗಿ ಹಮ್ಮಿಕೊಂಡ ವಿಜಯೋತ್ಸವದಲ್ಲಿ ಮಾತನಾಡಿದರು.


ಈ ಲಿತಾಂಶ ಲೋಕಸಭೆ ಚುನಾವಣೆ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಎಷ್ಟಿದೆ ಎಂಬುದನ್ನು ತೋರಿಸುತ್ತದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಬಹುಮತ ಸಾಧಿಸಲಿದ್ದು, ಮೋದಿ ಪ್ರಧಾನಿಯಾಗಿ ದೇಶವನ್ನು ಉತ್ತುಂಗಕ್ಕೆ ಕೊಂಡೊಯಲಿದ್ದಾರೆ ಎಂದರು.
ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪ್ರಮುಖರಾದ ಹುಲ್ಲಪ್ಪ ಗಡೇಕಾರ, ಈರಪ್ಪ ಗಡೇಕಾರ, ಬಂಗಾರಪ್ಪ ಪೂಜಾರಿ, ಬಸವರಾಜ ಹುಲ್ಲೂರು, ಕಾಳಪ್ಪ ನಾಲಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net