ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಲಿ

21Hrbd1
Published on

ಹಿರೆಬಾಗೇವಾಡಿ: ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ. ಮಹಿಳೆಯರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುರೇಶ ಇಟಗಿ ಹೇಳಿದರು. ಗ್ರಾಮದ ಶಿವಬಸವ ಕಲ್ಯಾಣ ಮಂಟಪದಲ್ಲಿ ಶ್ರೀ ೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಗುರುವಾರ ಹಮ್ಮಿಕೊಂಡಿದ್ದ ಶಿವಾನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳಾ ಕಲ್ಯಾಣ ಸಂಸ್ಥೆ ಯೋಜನಾ ನಿರ್ದೇಶಕಿ ಸುರೇಖಾ ಪಾಟೀಲ ನತ್ಯಾಜ್ಯ ವಿಲೇವಾರಿ ಕುರಿತು ಮಾಹಿತಿ ನೀಡಿದರು. ಗ್ರಾಪಂ ಅಧ್ಯೆ ಜಯಶ್ರೀ ಜಪ್ತಿ, ಯೋಗೀಶ ಕೆ., ಸುಗಂಧಾ ಅಲ್ಲಟ್ಟಿ, ಬಸವರಾಜ ಗುಗ್ಗರಿ, ಸೇವಾ ಪ್ರತಿನಿಧಿ ಮಹಾದೇವಿ ಇಂಚಲ, ಗಂಗಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net