ಪರಿಹಾರ ವಿತರಣೆ ಅಸಮರ್ಪಕ

SUNIL NAIK
Published on

ಭಟ್ಕಳ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಳೆ ಹಾನಿಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರ 1 ಲಕ್ಷ ರೂ. ಪರಿಹಾರವನ್ನೂ ಸರಿಯಾಗಿ ವಿತರಿಸುತ್ತಿಲ್ಲ ಮಾಜಿ ಶಾಸಕ ಸುನೀಲ ನಾಯ್ಕ ಆರೋಪಿಸಿದರು.

ಪಟ್ಟಣದ ಆಸರಕೇರಿ ನಿಚ್ಚಲಮಕ್ಕಿ ವೆಂಕಟ್ರಮಣ ಸಭಾಭವನದಲ್ಲಿ ಬಿಜೆಪಿ ಮಂಡಳ ವತಿಯಿಂದ ಭಾನುವಾರ ಆಯೋಜಿಸಿದ್ದ ತಾಲೂಕು ಕಾರ್ಯಕಾರಿಣಿ ಹಾಗೂ ಸದಸ್ಯತ್ವ ಅಭಿಯಾನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೇತಿ ಸಾಗಣೆಗೆ ಅಡ್ಡಪಡಿಸಿರಲಿಲ್ಲ. ಕಳೆದ ಒಂದು ವರ್ಷದಿಂದ ತಾಲೂಕಿನಲ್ಲಿ ರೇತಿ ಸಾಗಣೆ ಕೂಡ ನಿಂತು ಹೋಗಿದೆ. ಇದರಿಂದಾಗಿ ಕೂಲಿ ಕಾರ್ವಿುಕರು ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದಾರೆ. ತಾಲೂಕಿನಲ್ಲಿ ಯಾವುದೇ ಸರ್ಕಾರಿ ಕಚೇರಿಯಲ್ಲಿ ಜನಸಾಮಾನ್ಯರ ಕೆಲಸಗಳಾಗುತ್ತಿಲ್ಲ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಬಗ್ಗೆ ಸುಳ್ಳು ಹೇಳುವ ಅಗತ್ಯ ಇಲ್ಲ. ಅವರ ಕಾರ್ಯವೈಖರಿ ಬಗ್ಗೆ ಜನಸಾಮಾನ್ಯರಿಗೆ ಮನದಟ್ಟು ಮಾಡಿಕೊಟ್ಟರೆ ಸಾಕು ಎಂದರು.

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಎನ್.ಎಸ್. ಹೆಗಡೆ, ಜಿಲ್ಲಾ ಪ್ರಮುಖರಾದ ಪ್ರಶಾಂತ ನಾಯ್ಕ, ಶ್ರೀಕಾಂತ ನಾಯ್ಕ ಆಸರಕೇರಿ, ರಾಜೇಶ ನಾಯ್ಕ ಮಾತನಾಡಿದರು. ಜಿಲ್ಲಾ ಮಹಿಳಾ ಪ್ರಮುಖ ಸವಿತಾ ಗೊಂಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net