

ಮೈಸೂರು: ಮೈಸೂರು ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಹಲವು ವಿಮಾನಗಳು ದಿಢೀರಾಗಿ ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಸಮಸ್ಯೆ ಎದುರಿಸುತ್ತಿದ್ದಾರೆ ಎಂಬ ಆಕ್ಷೇಪ ಶುಕ್ರವಾರ ಹಮ್ಮಿಕೊಂಡಿದ್ದ ವಿಮಾನ ನಿಲ್ದಾಣ ಸಲಹಾ ಸಮಿತಿ ಸಭೆಯಲ್ಲಿ ವ್ಯಕ್ತವಾಯಿತು.
ಈ ಕುರಿತು ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಅಲಯನ್ಸ್ ಏರ್ ವಿಮಾನಯಾನ ಸೇವೆಯಲ್ಲಿ ವ್ಯತ್ಯಯ ಆಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಸಮಸ್ಯೆಗಳು ಆಗುತ್ತಿವೆ. ಹಲವಾರು ವಿಮಾನಗಳಿಗೆ ಸಾಕಷ್ಟು ಪ್ರಯಾಣಿಕರು ಇದ್ದರೂ ವಿಮಾನ ಸೇವೆ ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಅಲಯನ್ಸ್ ಏರ್ ಜಾಗದಲ್ಲಿ ಇಂಡಿಗೋ ವಿಮಾನದ ಸೇವೆ ಪ್ರಾರಂಭಿಸಲು ಮಾತುಕತೆ ನಡೆಯುತ್ತಿದೆ. ಅಲ್ಲದೆ ಸ್ಟಾರ್ ಏರ್ ಅವರೊಂದಿಗೂ ಮುಂದಿನವಾರ ಸಭೆ ನಡೆಸಲಾಗುವುದು ಎಂದರು.