ಬೆಳ್ತಂಗಡಿ: ಜೀವನದಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಿದಾಗ ಬಲಿಷ್ಠವಾದ ರಾಷ್ಟ್ರ ನಿರ್ಮಾಣ ಆಗಲು ಸಾಧ್ಯ ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಹೇಳಿದರು.
ಎಸ್‌ಡಿಎಂ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿ.ಇಡಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಸ್ವಾಗತ ದಿನಾಚರಣೆ, ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಡ ಸರ್ಕಾರಿ ಪಪೂ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕ ಮೋಹನ್ ಗೌಡ ವಿಷಯವಾರು ಸಂಘ ಉದ್ಘಾಟಿಸಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಕ್ಷೇತ್ರ ಸಮನ್ವಯ ಅಧಿಕಾರಿ ಮೋಹನ್ ಕುಮಾರ್ ಸಿ.ಎನ್., ಎಸ್‌ಡಿಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಕ್ಷೇತ್ರ ಸಮನ್ವಯ ಅಧಿಕಾರಿ ಮೋಹನ್ ಕುಮಾರ್ ಸಿ.ಎನ್., ಎಸ್‌ಡಿಎಂ ಬಿ.ಎಡ್ ಕಾಲೇಜು ಪ್ರಾಂಶುಪಾಲ ಸಂತೋಷ್ ಸಲ್ಡಾನ, ರತ್ನಮಾನಸ ನಿಲಯಪಾಲಕ ಯತೀಶ್ ಕೆ.ಬಳಂಜ, ಎಸ್‌ಡಿಎಂ ಮಹಿಳಾ ಐಟಿಐ ಕಾಲೇಜು ಪ್ರಾಂಶುಪಾಲ ವಿ.ಪ್ರಕಾಶ್ ಕಾಮತ್, ಡಿ.ಇಡಿ ಕಾಲೇಜಿನ ಉಪನ್ಯಾಸಕರಾದ ಮಂಜು ಆರ್ ಮತ್ತು ಅನುಷಾ ಡಿ.ಜೆ., ಸಿಬ್ಬಂದಿ, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಂಸ್ಥೆ ಪ್ರಾಂಶುಪಾಲ ಶ್ರೀಸ್ವಾಮಿ ಕೆ.ಎ. ಸ್ವಾಗತಿಸಿ, ಪ್ರಶಿಕ್ಷಣಾರ್ಥಿಗಳಾದ ಸುಮನಾ ವಂದಿಸಿ, ಅರ್ಚನಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.