ದ್ವಿಭಾಷಾ ಪದ್ಧತಿ ಬೋಧನೆಯ ಉದ್ಘಾಟನಾ ಕಾರ್ಯಕ್ರಮ

gan (15)
Published on

ಕುಂದಾಪುರ: ಬೈಂದೂರು ವಲಯದ ಮೊವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಪದ್ಧತಿ ಬೋಧನೆಯ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು.

ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಅವರು ಮಕ್ಕಳಿಗೆ ಪುಸ್ತಕ ನೀಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಪ್ರದೀಪ ಶೆಟ್ಟಿ, ಶಿಕ್ಷಣ ಸಂಯೋಜಕ ಯೋಗೀಶ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸತೀಶ ಶೆಟ್ಟಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎಂ.ಆರ್.ಕೇಶವ, ಎಸ್‌ಡಿಎಂಸಿ ಸದಸ್ಯರು, ಪಾಲಕರು, ಹಳೇ ವಿದ್ಯಾರ್ಥಿಗಳು, ಶಿಕ್ಷಕರು, ಅಡುಗೆ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕಿ ಶರಾವತಿ ಆಚಾರ್ಯ ಸ್ವಾಗತಿಸಿದರು. ಸಹಶಿಕ್ಷಕಿ ಭಾಗೀರಥಿ ನಿರೂಪಿಸಿದರು. ಸಂತೋಷ ಖಾರ್ವಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net