

ಆನೇಕಲ್: ಯುವಕರು ಅಂಬೇಡ್ಕರ್ ಚಿಂತನೆಗಳನ್ನು ಅಳವಡಿಸಿಕೊಂಡು ಹೋರಾಟ ಮಾಡುವ ಮೂಲಕ ಸಮಸಮಾಜವನ್ನು ನಿರ್ಮಿಸಲು ಶ್ರಮಿಸಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ಆರ್.ಡಿ.ರಾಜಣ್ಣ ಹೇಳಿದರು.
ತಾಲೂಕಿನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಗಿಹಳ್ಳಿಯಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಪುತ್ಥಳಿ ಉದ್ಘಾಟಿಸಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶೈಕ್ಷಣಿಕ ಪರಿಕರಗಳ ವಿತರಣೆ ಮತ್ತು ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಸಮಾಜದಲ್ಲಿ ತುಳಿತಕ್ಕೊಳಗಾದವರು ಶಿಕ್ಷಣ, ರಾಜಕೀಯ, ಉದ್ಯೋಗ ಸೇರಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲು, ಮೀಸಲಾತಿಯಿಂದ ಸಾಧ್ಯವಾಯಿತು. ಅಂಬೇಡ್ಕರ್ ಅವರು ಒಂದು ವರ್ಗಕ್ಕೆ ಮೀಸಲಾತಿಯನ್ನು ನೀಡಿಲ್ಲ. ಸಮಾಜದ ಎಲ್ಲ ವರ್ಗಗಳ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೊಡುಗೆ ನೀಡಿದ್ದಾರೆ ಎಂದರು.
ಮುಖಂಡರಾದ ಬೈರಾಜು, ನವೀನ್, ಮೋಹನ್, ಕೊಪ್ಪ ಮುನಿರಾಜು, ಗೋವಿಂದರಾಜು, ಬನ್ನೇರುಘಟ್ಟ ಮಹದೇವ್, ವೆಂಕಟೇಶ್ ಇದ್ದರು.