ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಿಂದ ಗ್ರಾಮಗಳ ಪ್ರಗತಿ : ಶಾಸಕ ಉಮಾನಾಥ ಕೋಟ್ಯಾನ್ ಅಭಿಪ್ರಾಯ

Published on

ಮೂಲ್ಕಿ: ಧಾರ್ಮಿಕ ಕ್ಷೇತ್ರಗಳು ಗ್ರಾಮದ ಮುಖದಂತೆ ಇದ್ದು, ಕ್ಷೇತ್ರಗಳ ಅಭಿವೃದ್ಧಿಯಿಂದ ಗ್ರಾಮಗಳ ಪ್ರಗತಿ ಸಾಧ್ಯ ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದರು.

ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದ ಹೊರಾಂಗಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ಉದ್ಘಾಟಿಸಿ ಮಾತನಾಡಿದರು.

ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯರಾದ ಪದ್ಮಿನಿ ವಿಜಯ್ ಕುಮಾರ್ ಶೆಟ್ಟಿ, ಜಯಕುಮಾರ್ ಮಟ್ಟು, ಸೀತಾರಾಮ್ ಭಟ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಸುಂದರ್ ಟಿ.ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಅಧಿಧನ್, ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ, ಕಲ್ಪನಾ ಬಲ್ಲಾಳ್, ಶಕ್ತಿಕೇಂದ್ರ ಪ್ರಮುಖ್ ಪ್ರವೀಣ್ ಶಿಮಂತೂರು, ಬಿಜೆಪಿ ನಾಯಕರಾದ ಭುವನಾಭಿರಾಮ ಉಡುಪ, ಅಭಿಲಾಷ್ ಶೆಟ್ಟಿ ಕಟೀಲು, ಶರತ್ ಕುಬೆವೂರು, ಸಂಜೀತ್ ಶೆಟ್ಟಿ, ರಂಗನಾಥ ಶೆಟ್ಟಿ, ಕಿಶೋರ್ ಶೆಟ್ಟಿ ತೆಂಗಾಳಿ, ಉದಯ ಅಮೀನ್ ಮಟ್ಟು ಸುಧೀರ್ ಶೆಟ್ಟಿ ಶಿಮಂತೂರು, ಭಾಸ್ಕರ್ ದೇವಾಡಿಗ, ಯುವಕ ಮಂಡಲ, ಮಹಿಳಾ ಭಜನಾ ಮಂಡಳಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net