ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಮುಖ್ಯ

Inaugurate the race track
Inaugurate the race track
Published on

ಸೂಲಿಬೆಲೆ: ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಬೇಕು ಎಂದು ಯುವ ಮುಖಂಡ ನಾರಾಯಣಗೌಡ ಹೇಳಿದರು.
ಸೂಲಿಬೆಲೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ 400 ಮೀಟರ್ ಓಟದ ಟ್ರಾಕ್ ಉದ್ಘಾಟಿಸಿ ಮಾತನಾಡಿದರು. ವಸತಿ ಶಾಲೆ ಸಿಬ್ಬಂದಿ ವರ್ಗದ ಬೇಡಿಕೆಯಂತೆ ಗ್ರಾಪಂ ಸಹಯೋಗದಲ್ಲಿ ನರೇಗಾ ಅನುದಾನದಲ್ಲಿ ಈ ಕಾಮಗಾರಿ ನಿರ್ವಹಿಸಲಾಗಿದೆ. ವಿದ್ಯಾರ್ಥಿಗಳ ಕ್ರೀಡಾ ಆಭ್ಯಾಸಕ್ಕೆ ಸಹಕಾರಿಯಾಗಿದೆ ಎಂದರು. ಗ್ರಾಪಂ ಅಧ್ಯಕ್ಷ ಜನಾರ್ದನರೆಡ್ಡಿ, ಉಪಾಧ್ಯಕ್ಷೆ ಷಾಜಿಯಾಖಾನಂ ಜಿಯಾವುಲ್ಲಾ, ಪ್ರಾಚಾರ್ಯ ಬಸವರಾಜ್, ಪಿಡಿಒ ಮಂಜುನಾಥ್, ಕಾರ್ಯದರ್ಶಿ ಚಂದ್ರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net