ನೈತಿಕ ಬೋಧನೆಯೊಂದಿಗೆ ಉತ್ತಮ ವಾತಾವರಣ

tution
Published on

ಹೆಬ್ರಿ: ಮಕ್ಕಳಿಗೆ ಟ್ಯೂಷನ್ ತರಗತಿ ಉಪಯೋಗವಾಗಲಿದೆ. ನೈತಿಕಾಧಾರಿತ ಬೋಧನೆಯೊಂದಿಗೆ ಉತ್ತಮ ವಾತಾವರಣದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ತರಗತಿಗಳಲ್ಲಿ ನಡೆಸಲಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಯೋಜನೆ ಅಧಿಕಾರಿ ಲೀಲಾವತಿ ಹೇಳಿದರು.

ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕುಡೂರು ಶಾಲೆಯಲ್ಲಿ ಟ್ಯೂಷನ್ ತರಗತಿ ಉದ್ಘಾಟಿಸಿ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ರವಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುನಿಯಾಲು ಲಯನ್ಸ್ ಕ್ಲಬ್ ಅಧ್ಯಕ್ಷ ಭುಜಂಗ ಶೆಟ್ಟಿ, ಶಾಲಾ ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಪ್ರಸನ್ನ ಶೆಟ್ಟಿ ಜಯಲೀಲಾ, ಪಡುಕುಡೂರು ಒಕ್ಕೂಟ ಅಧ್ಯಕ್ಷ ಹೃದಯ ಶೆಟ್ಟಿ, ಮುಖ್ಯ ಶಿಕ್ಷಕ ಹರೀಶ್ ಪೂಜಾರಿ, ಹಾಲು ಉತ್ಪಾದಕರ ಸಂಘ ಪಡುಕೂಡುರು ಅಧ್ಯಕ್ಷ ಜಗದೀಶ ಹೆಗ್ಡೆ, ಪ್ರಮುಖರಾದ ಭಾಸ್ಕರ್ ಶೆಟ್ಟಿ, ಸಂತೋಷ್ ನಾಯ್ಕ, ತಾರಾವತಿ ಶೆಟ್ಟಿ, ಶಂಕರ್ ಶೆಟ್ಟಿ, ರಕ್ಷಣ್ ಶೆಟ್ಟಿ, ಮಾನ್ವಿ, ಸುದರ್ಶನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net