ಬಿಜೆಪಿಯಿಂದ ಬಡವರಿಗೆ ಅನ್ಯಾಯ, ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪ

abhay
Published on

ಕಾರ್ಕಳ: ದೇಶದ ಪ್ರಜಾತಂತ್ರ ವ್ಯವಸ್ಥೆ ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದ್ದು, ಕಾಂಗ್ರೆಸ್ ತನ್ನ ಆಡಳಿತ ಅವಧಿಯಲ್ಲಿ ವಿವಿಧ ಕಾನೂನುಗಳನ್ನು ಅನುಷ್ಠಾನ ಜಾರಿಗೊಳಿಸುವ ಮೂಲಕ ಅದಕ್ಕೆ ಭದ್ರ ಬುನಾದಿ ಹಾಕಿತ್ತು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.

ಈದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಅಡಳಿತಾವಧಿಯಲ್ಲಿ ಜಾರಿಗೆ ಬಂದ ಭೂ ಸುಧಾರಣೆ ಮಸೂದೆ, ಸಿಇಟಿ ಸೇರಿದಂತೆ ಜನಪರ ಯೋಜನೆಗಳಿಂದು ಬಿಜೆಪಿಯ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯ ಭದ್ರಮುಷ್ಠಿಯಲ್ಲಿ ಸಿಲುಕಿ ಬಡವರಿಗೆ ಅನ್ಯಾಯವಾಗುತ್ತಿದೆ. ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತದ ಆಡಳಿತ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಬೇಕು ಎಂದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ವಕ್ತಾರ ಬಿಪಿನ್‌ಚಂದ್ರ ಪಾಲ್ ನಕ್ರೆ, ಪ್ರೇಮ್‌ಕುಮಾರ್ ಜೈನ್, ಮೋಹನ್‌ದಾಸ್ ಪೈ, ಸುರೇಶ್ ಆಚಾರ್ಯ, ಅಬೂಬಕ್ಕರ್ ಸಾಹೇಬ್, ಭಾನುಭಾಸ್ಕರ್ ಉಪಸ್ಥಿತರಿದ್ದರು.

ಸ್ಥಳೀಯ ಘಟಕ ಅಧ್ಯಕ್ಷ ವಿಜಯಕುಮಾರ್ ಜೈನ್ ಪ್ರಸ್ತಾವಿಸಿ, ಸ್ವಾಗತಿಸಿದರು. ಈದು ಸದಾನಂದ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net