

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೆಲ ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಸಾಲ ಮಂಜೂರಾತಿ ವಿಳಂಬವಾಗುತ್ತಿದೆ. ಸರ್ಕಾರದ ಯೋಜನೆಗಳಿಗೂ ಸಾಲ ಕೊಡಲು ಹಿಂದೇಟು ಹಾಕುತ್ತಿರುವ ನಿದರ್ಶನಗಳಿವೆ. ಹೀಗಾಗಿ ಜನ ಸಹಕಾರಿ ಬ್ಯಾಂಕ್‌ಗಳತ್ತ ಮುಖ ಮಾಡುತ್ತಿದ್ದಾರೆ. ಈ ದಿಶೆಯಲ್ಲಿ ಮುರುಗೇಶ ನಿರಾಣಿಯವರ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ಜನಮನ್ನಣೆ ಗಳಿಸಿ ಮುಂದುವರಿಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.
ನಗರದ ಸಪ್ತಾಪುರದಲ್ಲಿ ಸ್ಥಾಪಿಸಲಾದ ಮುಧೋಳದ ವಿಜಯ (ಎಂಆರ್‌ಎನ್) ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ 65ನೇ ಶಾಖೆಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಲಾಕರ್ ಉದ್ಘಾಟಿಸಿದ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ನಿರಾಣಿಯವರುಸಕ್ಕರೆ ಕಾರ್ಖಾನೆ ಮತ್ತು ಸಹಕಾರಿ ಬ್ಯಾಂಕ್‌ಗಳ ಮೂಲಕ 74,000 ಸಾವಿರ ಕುಟುಂಬಗಳಿಗೆ ಅನ್ನದಾತರಾಗಿದ್ದಾರೆ ಎಂದರು.
ವಿಜಯ (ಎಂಆರ್‌ಎನ್) ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಮುರುಗೇಶ ನಿರಾಣಿ ಮಾತನಾಡಿ, ನಮ್ಮ ಮೇಲೆ ನಂಬಿಕೆ ಇಟ್ಟವರ ಠೇವಣಿದಾರರಿಗೆ ಅಭಿನಂದನೆಗಳು. ಧಾರವಾಡ ನೆಲದಿಂದ ಉದ್ಯೋಗ ಕಲ್ಪಿಸುವಂಥ ಕೈಗಾರಿಕೋದ್ಯಮಿಗಳು ಹೊರಹೊಮ್ಮಬೇಕು. ಕೇಂದ್ರ- ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯ ಪಡೆದು ಯಶಸ್ವಿ ಉದ್ಯಮಿಯಾಗಬೇಕು ಎಂದು ಆಶಿಸಿದರು.
ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಹನುಮಂತ ನಿರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಧಾರವಾಡ ಶಾಖೆಯ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.