ವಿದ್ಯಾರ್ಥಿಗಳಿಗೆ ಮೂಲತ್ವ ಫೌಂಡೇಷನ್ ಕೊಡುಗೆ : ನವಾಝ್ ಕಲ್ಲರಕೋಡಿ ಮೆಚ್ಚುಗೆ

New Project (3)
Published on

ಉಳ್ಳಾಲ: ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿ ಬೇಕಾಗಿದ್ದ ವಿಶ್ರಾಂತಿ ಕೊಠಡಿಯನ್ನು ಮೂಲತ್ವ ಫೌಂಡೇಷನ್ ಚಾರಿಟೆಬಲ್ ಟ್ರಸ್ಟ್ ನಿರ್ಮಿಸುವ ಮೂಲಕ ಕೊಡುಗೆ ನೀಡಿದೆ ಎಂದು ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ನವಾಝ್ ಕಲ್ಲರಕೋಡಿ ಶ್ಲಾಘಿಸಿದರು.

ಮಂಗಳೂರಿನ ಮೂಲತ್ವ ಫೌಂಡೇಷನ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಮೊಂಟೆಪದವಿನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವ್ಯವಸ್ಥೆ ಮಾಡಲಾದ ವಿದ್ಯಾರ್ಥಿಗಳ ವಿಶ್ರಾಂತಿ ಕೇಂದ್ರ ಸಾಂತ್ವನ ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಮೂಲತ್ವ ಫೌಂಡೇಷನ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ಮಾತನಾಡಿ, ಸಂಸ್ಥೆಯ ಮೂಲಕ ಶೈಕ್ಷಣಿಕವಾಗಿಯೂ ಸಮಾಜಕ್ಕೆ ಕೊಡುಗೆ ನೀಡುತ್ತಾ ಬಂದಿದ್ದೇವೆ. ಮೊಂಟೆಪದವು ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ವಿಶ್ರಾಂತಿ ಕೊಠಡಿಯ ನಿರ್ಮಾಣದ ಬೇಡಿಕೆ ಬಂದಾಗ ಬೇಕಾಗುವ ಎಲ್ಲ ಸೌಲಭ್ಯ ಒದಗಿಸಲಾಗಿದೆ ಎಂದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಕಾರ್ಯಾಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ ಮಾತನಾಡಿದರು. ಪ್ರೌಢಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮುರಳೀಧರ ಶೆಟ್ಟಿ ಮೋರ್ಲ, ನರಿಂಗಾನ ಗ್ರಾಮ ಪಂಚಾಯಿತಿ ಸದಸ್ಯರಾದ ಮೊಹಮ್ಮದ್ ಹನೀಫ್ ಚಂದಹಿತ್ಲು, ರೆಹಮಾನ್, ಕಾಲೇಜಿನ ಪ್ರಾಂಶುಪಾಲ ಸುರೇಶ್ ಎಂ.ಕೆ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಪ್ರಮೀಳಾ, ಟ್ರಸ್ಟಿಗಳಾದ ಶೈನಿ, ಅಕ್ಷತಾ ಕದ್ರಿ, ಲಕ್ಷ್ಮೀಶ, ಕಲ್ಪನಾ ಕೊಟ್ಯಾನ್, ಬಲ್ಮಠ ಕಾಲೇಜಿನ ಉಪನ್ಯಾಸಕ ಉಮೇಶ್ ಕೆ.ಆರ್. ಮೊದಲಾದವರು ಉಪಸ್ಥಿತರಿದ್ದರು. ಉಪಪ್ರಾಂಶುಪಾಲೆ ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net