ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ: ಜಿಲ್ಲಾ ಪ್ರಾಂತಪಾಲ ಕೆ.ಟಿ.ಹನುಮಂತು ಸಲಹೆ

Inauguration of Alliance Institute Mandya
Published on

ಮಂಡ್ಯ: ಎಲ್ಲ ಜನರನ್ನು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಂಪರ್ಕ ಸೇತುವೆಯಾಗಿ ಅಲಯನ್ಸ್ ಕ್ಲಬ್ ಕಾರ್ಯನಿರ್ವಹಿಸುತ್ತಾ ಬಂದಿದೆ ಎಂದು ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್‌ನ ಜಿಲ್ಲಾ ಪ್ರಾಂತಪಾಲ ಕೆ.ಟಿ.ಹನುಮಂತು ಹೇಳಿದರು.

ನಗರದ ಸಿಪಾಯಿ ಹೋಟೆಲ್ ಸಭಾಂಗಣದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ವತಿಯಿಂದ ನೆಲದನಿ ಅಲಯನ್ಸ್ ಸಂಸ್ಥೆ ಮತ್ತು ಪರಿಸರ ಅಲಯನ್ಸ್ ಸಂಸ್ಥೆ ಉದ್ಘಾಟನೆ ಹಾಗೂ ಕೌಶಲ್ಯ ಅಲಯನ್ಸ್ ಸಂಸ್ಥೆ ಪದಾಧಿಕಾರಿಗಳಿಗೆ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಲಯನ್ಸ್ ಕ್ಲಬ್ ಸೇರಿ ಸ್ನೇಹ ಮತ್ತು ಸೇವೆ ಮಾಡುವ ಕಾರ್ಯದಲ್ಲಿ ತೊಡಗಿಕೊಳ್ಳಿ. ಸೇವಾ ಕಾರ್ಯದಲ್ಲಿ ತೊಡಗಲು ವೈದ್ಯರು ಹಾಗೂ ಇಂಜಿನಿಯರ್‌ಗಳು, ಉದ್ಯಮಿಗಳು, ರಾಜಕಾರಣಿಗಳು ಸೇರ್ಪಡೆಗೊಂಡಿದ್ದಾರೆ. ಇಂದು ಕಲಾವಿದರ ತಂಡ ಮತ್ತು ಪರಿಸರ ಪ್ರೇಮಿಗಳು ನೂತನ ಸಂಘ ಉದ್ಘಾಟಿಸುತ್ತಿರುವುದು ಸಂತೋಷ ತಂದಿದೆ ಎಂದರು.

ಅಲಯನ್ಸ್‌ನ ಅಂತಾರಾಷ್ಟ್ರೀಯ ನಿರ್ದೇಶಕ ನಾಗರಾಜು ಭೈರಿ, ಒಂದನೇ ಉಪ ಪ್ರಾಂತಪಾಲ ಮಾದೇಗೌಡ, ಎರಡನೇ ಜಿಲ್ಲಾ ಉಪ ಪ್ರಾಂತಪಾಲ ಶಶಿಧರ ಈಚಗೆರೆ, ಖಜಾಂಚಿ ಟಿ.ಎನ್.ರಕ್ಷಿತ್‌ರಾಜ್, ನೀನಾ ಪಟೇಲ್, ರತ್ನಮ್ಮ ಇತರರಿದ್ದರು. ಇದೇ ವೇಳೆ ನೆಲದನಿ ಅಲಯನ್ಸ್ ಸಂಸ್ಥೆಯ ಅಧ್ಯಕ್ಷೆ ಆರ್.ಮಹಾಲಕ್ಷ್ಮೀ ಹಾಗೂ ಪರಿಸರ ಅಲಯನ್ಸ್ ಸಂಸ್ಥೆಯ ಅಧ್ಯಕ್ಷ ಎಸ್.ಬಸವರಾಜು ಅಧಿಕಾರ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net