

ಗಂಗೊಳ್ಳಿ: ಆಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅನುಮೋದನೆಗೊಂಡ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಯನ್ನು ಮಾರಣಕಟ್ಟೆ ಚಿತ್ತೂರು ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ಮಂಜ ಉದ್ಘಾಟಿಸಿದರು. ಆಲೂರು ಗ್ರಾಪಂ ಅಧ್ಯಕ್ಷ ರಾಜೇಶ್ ಎನ್.ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಮಾರಣಕಟ್ಟೆ ಚಿತ್ತೂರು ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಉಚಿತ ನೋಟ್ಸ್‌ಬುಕ್ ಸಮವಸ್ತ್ರ, ಐಡಿ ಕಾರ್ಡ್ ಮತ್ತು ಬೆಲ್ಟ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ರಾಷ್ಟ್ರಮಟ್ಟದ ಕ್ರೀಡಾಪಟು ನಿತೇಶ್ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಂದ್ರ ಆಲೂರು ಅವರನ್ನು ಸನ್ಮಾನಿಸಲಾಯಿತು.
ಮಕ್ಕಳನ್ನು ಸಾಂಸ್ಕೃತಿಕವಾಗಿ ಸಕ್ರಿಯವಾಗಿ ತೊಡಗಿಸುವ ನಿಟ್ಟಿನಲ್ಲಿ ನೂತನವಾಗಿ ಆರಂಭಿಸಲಾಗಿರುವ ಚಿಗುರು ಸಾಂಸ್ಕೃತಿಕ ಸಂಘದ ಬ್ಯಾನರನ್ನು ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಮತ್ತು ಯಕ್ಷಗಾನ ಗುರು ಸುರೇಂದ್ರ ಆಲೂರು ಅನಾವರಣಗೊಳಿದರು.
ಜಿಪಂ ಮಾಜಿ ಸದಸ್ಯ ಮಂಜಯ್ಯ ಶೆಟ್ಟಿ, ಆಲೂರು ಗ್ರಾಪಂ ಉಪಾಧ್ಯಕ್ಷ ಸಿಂಗಾರಿ, ಗ್ರಾಪಂ ಸದಸ್ಯರಾದ ರವಿ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಜಯಲಕ್ಷ್ಮೀ ಗಾಣಿಗ, ಉಪ್ರಳ್ಳಿ ಶ್ರೀ ಕಾಳಿಕಾಂಬ ದೇವಸ್ಥಾನ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ ಕಳಿ, ಎಸ್‌ಡಿಎಂಸಿ ಅಧ್ಯಕ್ಷ ದತ್ತಾತ್ರೇಯ ಭಟ್, ಪ್ರೌಢಶಾಲಾ ಮುಖ್ಯಶಿಕ್ಷಕ ನಾರಾಯಣ ಶೆಟ್ಟಿ, ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯಶಿಕ್ಷಕ ಶಶಿಧರ ಶೆಟ್ಟಿ, ಎಸ್‌ಡಿಎಂಸಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ಸಹಶಿಕ್ಷಕ ದಿನಕರ ದೇವಾಡಿಗ ಸ್ವಾಗತಿಸಿ, ವೀರೇಂದ್ರ ಜೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗರತ್ನಾ ಜಿ.ಕಾರ್ಯಕ್ರಮ ನಿರೂಪಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಲೀನಾ ಕಾರ್ಡಿನ್ ವಂದಿಸಿದರು.