60 ಅಂಗನವಾಡಿ ನಿರ್ಮಾಣಕ್ಕೆ ಪ್ರಸ್ತಾವನೆ

Gangavathi anganavadi building open
ಯಲಬುರ್ಗಾ ತಾಲೂಕಿನ ಮಕ್ಕಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡವನ್ನು ಸಿಡಿಪಿಒ ಬೇಟದೇಶ ಮಾಳೆಕೊಪ್ಪ ಉದ್ಘಾಟಿಸಿದರು. ತಾಪಂ ಸಹಾಯಕ ನಿರ್ದೇಶಕ ಫಕೀರಪ್ಪ ಕಟ್ಟಿಮನಿ, ಮುರಡಿ ಗ್ರಾಪಂ ಅಧ್ಯಕ್ಷ ಯಮನಪ್ಪ ಮಾಳಿ, ಅಭಿವೃದ್ಧಿ ಅಧಿಕಾರಿ ಪುಷ್ಪಲತಾ ಮಾಲಿಪಾಟೀಲ್ ಇತರರಿದ್ದರು.
Published on

ಯಲಬುರ್ಗಾ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗನವಾಡಿಗೆ ಜಾರಿಗೊಳಿಸಿರುವ ಅನೇಕ ಯೋಜನೆಗಳು ಸಾಮಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಸಿಡಿಪಿಒ ಬೇಟದೇಶ ಮಾಳೆಕೊಪ್ಪ ಹೇಳಿದರು.

ತಾಲೂಕಿನ ಮಕ್ಕಳ್ಳಿ ಗ್ರಾಮದಲ್ಲಿ ಆರ್‌ಐಡಿಎಫ್ ಯೋಜನೆಯಡಿ ಅಂಗನವಾಡಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮಸ್ಥರ ಸಹಕಾರದಿಂದ 7 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 11.95 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕೇಂದ್ರಕ್ಕೆ ವಿದ್ಯುತ್ ಸಂಪರ್ಕ ಹಾಗೂ ಬಣ್ಣ ಬಳಿದು ಚಾಲನೆ ನೀಡಲಾಗಿದೆ. ತಾಲೂಕಿನಾದ್ಯಂತ 60 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ತಾಪಂ ನರೇಗಾ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್ ಮಾತನಾಡಿ, ಅಂಗನವಾಡಿಗಳಿಗೆ ಶೌಚಗೃಹ ನಿರ್ಮಿಸಲು ಸಹಾಯ ನೀಡಬೇಕು. ಮಕ್ಕಳ ಕಲಿಕೆಗೆ ಒತ್ತು ಕೊಡಬೇಕು. ಶಾಲೆಗಳ ಬೇಡಿಕೆಗೆ ಅನುಗುಣವಾಗಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿ ಕೆಲಸ ಮಾಡಿಸಲು ಸಿದ್ಧ ಎಂದರು. ಮಕ್ಕಳ್ಳಿಯ ಶಿವಾನಂದ ಸ್ವಾಮೀಜಿ, ತಾಪಂ ಸಹಾಯಕ ನಿರ್ದೇಶಕ ಫಕೀರಪ್ಪ ಕಟ್ಟಿಮನಿ, ಮುರಡಿ ಗ್ರಾಪಂ ಅಧ್ಯಕ್ಷ ಯಮನಪ್ಪ ಮಾಳಿ, ಅಭಿವೃದ್ಧಿ ಅಧಿಕಾರಿ ಪುಷ್ಪಲತಾ ಮಾಲಿಪಾಟೀಲ್, ಸದಸ್ಯೆ ಪುಷ್ಪಾವತಿ ಕರೆಕುರಿ, ವಜ್ರಬಂಡಿ ಮೇಲ್ವಿಚಾರಕಿ ಗಂಗಾ ಮೇಟಿ, ಅಂಗನವಾಡಿ ಶಿಕ್ಷಕಿಯರಾದ ವಿಜಯಲಕ್ಷ್ಮೀ ದುರಗಪ್ಪ ಮಕ್ಕಳ್ಳಿ, ಶೋಭಾ ಚಿತ್ತರಗಿ ಮಠ, ಸುಜಾತಾ ಹಡಪದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net