

ಉಪ್ಪಿನಂಗಡಿ: ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ಉತ್ತಮಗೊಳಿಸಲು ಅಂಗನವಾಡಿ ಕೇಂದ್ರಗಳು ಪರಿಣಾಮಕಾರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಹಿರೇಬಂಡಾಡಿ ಗ್ರಾಮದ ಪಾಲೆತ್ತಡಿಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ದಂತ ವೈದ್ಯ ಡಾ.ರಾಜಾರಾಮ ಕೆ.ಬಿ.ಮಾತನಾಡಿ, ಮಕ್ಕಳಿಗೆ ಮನೆ ವಾತಾವರಣದಲ್ಲಿ ಪೌಷ್ಟಿಕ ಆಹಾರದೊಂದಿಗೆ ಸಂಸ್ಕಾರ ಶಿಕ್ಷಣ ಒದಗಿಸಲು ಅಂಗನವಾಡಿ ಕೇಂದ್ರಗಳು ಸಹಕಾರಿ ಎಂದರು.
ಪಂಚಾಯಿತಿ ಸದಸ್ಯ ಸತೀಶ್ ಶೆಟ್ಟಿ ಹೆನ್ನಾಳ, ಗೀತಾ ದಾಸರಮೂಲೆ, ಲಕ್ಷ್ಮೀಶ, ಸವಿತಾ ಹರೀಶ್, ಭವಾನಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಅನಿತಾ, ಮೇಲ್ವಿಚಾರಕ ನಂದನ, ಪ್ರಮುಖರಾದ ವೆಂಕಪ್ಪ ಪೂಜಾರಿ, ನಿತ್ಯಾನಂದ ಶೆಟ್ಟಿ, ಪ್ರಸಾದ್, ಪಂ.ಕಾರ್ಯದರ್ಶಿ ಸತೀಶ್ ಬಂಗೇರ, ಅಂಗನವಾಡಿ ಕಾರ್ಯಕರ್ತೆ ಪವಿತ್ರಾ ಮೊದಲಾದವರು ಉಪಸ್ಥಿತರಿದ್ದರು.