ಆಂಜನೇಯಸ್ವಾಮಿ ದೇಗುಲ ಉದ್ಘಾಟನೆ ಇಂದು

17 HRS 06
ಹಿರೀಸಾವೆ ಹೋಬಳಿ ಹೊನ್ನಮಾರನಹಳ್ಳಿ ಗ್ರಾಮದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ ಶ್ರೀ ಆಂಜನೇಯಸ್ವಾಮಿ ದೇಗುಲ.
Published on

ಹಿರೀಸಾವೆ: ಹೋಬಳಿಯ ಹೊನ್ನಮಾರನಹಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಆಂಜನೇಯಸ್ವಾಮಿ ದೇಗುಲದ ಉದ್ಘಾಟನೆ ಕಾರ್ಯ ಮೇ 18ರಂದು ನಡೆಯಲಿದೆ.

ಮುಂಜಾನೆಯಿಂದಲೇ ಹೋಮ, ಪರಿವಾರ, ಮೂರ್ತಿ, ಮಾನೋನ್ಮಾನ ಪ್ರಮಾಣ, ಶಾಂತೊಹೋಮಗಳು ಹಾಗೂ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿವೆ. ದೇವಾಲಯದ ಉದ್ಘಾಟನೆ ಪ್ರಯಕ್ತ ವಿವಿಧ ಹೋಮಗಳು ನಡೆದು, ನಂತರ ಪ್ರಾಣ ಪ್ರತಿಷ್ಠಾಪನೆ, ಮಹಾ ಕುಂಭಾಭಿಷೇಕ ನಡೆಯಲಿದೆ.

ಶಾಸಕ ಸಿ.ಎನ್.ಬಾಲಕೃಷ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಲಲಿತ್ ರಾಘವ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ತಹಸೀಲ್ದಾರ್ ಬಿ.ಎಂ.ಗೋವಿಂದರಾಜು, ಬಿಬಿಎಂಪಿ ನಿವೃತ್ತ ಮುಖ್ಯ ಇಂಜಿನಿಯರ್ ಎಚ್.ಸಿ.ಅನಂತಸ್ವಾಮಿ, ಬಿಜೆಪಿ ಮುಖಂಡ ಆನಂದ್, ಕಾಂಗ್ರೆಸ್ ಮುಖಂಡ ರಾಮಚಂದ್ರ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಭಾಗವಹಿಸಲಿದ್ದಾರೆ ಎಂದು ದೇಗುಲ ಜೀರ್ಣೋದ್ಧಾರ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net