ಬಂಡೀಪುರ ಸಿಎಫ್ ಕಚೇರಿ ಉದ್ಘಾಟನೆ ಇಂದು

Published on

ಗುಂಡ್ಲುಪೇಟೆ: ಮೇಲುಕಾಮನಹಳ್ಳಿಯಲ್ಲಿ ಹೊಸದಾಗಿ ನಿರ್ಮಿಸಿರುವ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯನ್ನು ಜ.19ರಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವ ಈಶ್ವರ ಬಿ.ಖಂಡ್ರೆ ಉದ್ಘಾಟಿಸುವರು.

ರಾಜ್ಯ ಅರಣ್ಯ ಮಂಡಳಿಯ ಸದಸ್ಯ ಹಾಗೂ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಹಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷ ನಾಗರಾಜು, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಿಜೇಶ್ ಕುಮಾರ್ ದೀಕ್ಷಿತ್, ಸುಭಾಷ್ ಮಾಲ್ಕಡೆ, ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕುಮಾರ್ ಪುಷ್ಕರ್, ಮನೋಜ್, ಚಾಮರಾಜನಗರ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್, ಮೈಸೂರು ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‌ಕುಮಾರ್, ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಮಾಲತಿಪ್ರಿಯ ಭಾಗವಹಿಸಲಿದ್ದಾರೆ ಎಂದು ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಎಸ್.ಪ್ರಭಾಕರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net