4ಕ್ಕೆ ಬಿಲ್ಲವ ಸಮಾಜದ ಸಂಘದ ಉದ್ಘಾಟನೆ

Published on

ನಾಪೋಕ್ಲು: ಇಲ್ಲಿನ ಬಿಲ್ಲವ ಸಮಾಜದ ವತಿಯಿಂದ ಆ.4 ರಂದು ಆಟಿಡೊಂಜಿ ದಿನ -2024 ಕಾರ್ಯಕ್ರಮವನ್ನು ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ ಪ್ರತೀಪ ಹೇಳಿದರು.

ಅಂದು ಬಿಲ್ಲವ ಸಮಾಜದ ಸಂಘದ ಉದ್ಘಾಟನೆ ನಡೆಯಲಿದೆ. ಆ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದೆ. ಬಳಿಕ ಬಿಲ್ಲವ ಸಮಾಜದ ಮಹಾಸಭೆ ನಡೆಯಲಿದೆ. ನಾಪೋಕ್ಲು ಹೋಬಳಿ ಮಟ್ಟದಲ್ಲಿ ಸಮಾಜದವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಆಟಿಡೊಂಜಿ ದಿನ-2024 ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬೆಳಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಆಟಿ ಮಾಸದಲ್ಲಿ ತಯಾರಿಸುವ ವಿಶೇಷ ಖಾದ್ಯಗಳ ತಿನಿಸುಗಳ ಪ್ರದರ್ಶನ ಹಾಗೂ ಉಟೋಪಚಾರ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಿರಂತರವಾಗಿ ಸಮಾಜ ಸೇವೆ ಮಾಡುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಲಾಗಿದ್ದು, ಕನಿಷ್ಠ 50 ಯೂನಿಟ್ ರಕ್ತ ಸಂಗ್ರಹಿಸುವ ಉದ್ದೇಶ ಹೊಂದಿದ್ದೇವೆ. ಮಧ್ಯಾಹ್ನ ಬಿಲ್ಲವ ಸಮಾಜದ ವಾರ್ಷಿಕ ಮಹಾಸಭೆ ನಡೆಯಲಿದ್ದು ಸಮಾಜದವರಿಗಾಗಿ ಮನರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ.ಪ್ರತೀಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್.ಪೊನ್ನಣ್ಣ, ರಕ್ತನಿಧಿ ಅಧಿಕಾರಿ ಡಾ.ಕರಂಬಯ್ಯ, ಮಡಿಕೇರಿ ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ , ನೋಟರಿ ವಕೀಲರಾದ ದಯಾ ಹೊನ್ನಪ್ಪ , ಮೂರ್ನಾಡು ಭಗವಾನ್ ಬಿಲ್ಡರ್ಸ್ ಮಾಲೀಕ ಸುರೇಶ್ ಮುತ್ತಪ್ಪ, ಹಿಂದು-ಮಲಯಾಳಿ ಸಂಘದ ಅಧ್ಯಕ್ಷ ಅನಿಲ್, ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಪೂವಪ್ಪ, 50ಕ್ಕೂ ಅಧಿಕ ಭಾರಿ ರಕ್ತದಾನ ಮಾಡಿದ ರಾಮಪ್ಪ ಪೊಲೀಸ್, ಸಿವಿಲ್ ಕಂಟ್ರಾಕ್ಟರ್ ಗೋಪಾಲ ಮೂರ್ನಾಡು, ನಿವೃತ್ತ ಪೊಲೀಸ್ ಅಧಿಕಾರಿ ಲಿಂಗಪ್ಪ ಮೂರ್ನಾಡು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಬಿಲ್ಲವ ಸಮಾಜದ ಕಾರ್ಯದರ್ಶಿ ರೋಹಿತ್, ಸಂಘಟನಾ ಕಾರ್ಯದರ್ಶಿ ಬಿ.ಎಸ್ ನಾಗರಾಜ್, ಖಜಾಂಚಿ ಬಿ.ಡಿ.ದೀಪಕ್. ಸದಸ್ಯರಾದ ಪುನೀತ್, ಸದಸ್ಯ ಬಿ.ಎಸ್ ದಿಲೀಪ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net