

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಪ್ರಭಾರಿ ರಘುಪತಿ ಭಟ್ ಸೋಮವಾರ ಬಿಜೆಪಿ ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಗೆಲ್ಲಿಸಲು ನಾವೆಲ್ಲರೂ ಸೇರಿಕೊಂಡು ಕೆಲಸ ಮಾಡಬೇಕು. ಅದಕ್ಕೆ ಈ ಚುನಾವಣಾ ಕಾರ್ಯಾಲಯದ ಉದ್ಘಾಟನೆ ನಾಂದಿಯಾಗಲಿ ಎಂದು ಆಶಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಕಾರ್ಯದರ್ಶಿ ಡಿ.ಎಸ್.ಅರುಣ್, ಶಾಸಕ ಎಸ್.ಎನ್.ಚನ್ನಬಸ್ಪಪ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಆರ್.ಕೆ.ಸಿದ್ದರಾಮಣ್ಣ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಮುಂತಾದವರಿದ್ದರು.