ಕಾಂಕ್ರಿಟ್ ರಸ್ತೆ ಉದ್ಘಾಟನೆ

Inauguration of concrete road
Published on

ಕುಶಾಲನಗರ:

ಕುಶಾಲನಗರ ಪುರಸಭೆ ವ್ಯಾಪ್ತಿಯ ಗೊಂದಿಬಸವನಹಳ್ಳಿಯ 7ನೇ ವಾರ್ಡ್ನಲ್ಲಿ 27 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಡಾ. ಮಂತರ್ ಗೌಡ ಭಾನುವಾರ ಸಂಜೆ ಉದ್ಘಾಟಿಸಿದರು.

ಈ ಸಂದರ್ಭ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪುರಸಭೆ ಸದಸ್ಯ ಖಲೀಮುಲ್ಲಾ, ಜಗದೀಶ್, ಪ್ರಕಾಶ್ ಹಾಗೂ ಗ್ರಾಮದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net