ಕಾಂಗ್ರೆಸ್ ಕಚೇರಿ ಉದ್ಘಾಟನೆ

ಕಾಂಗ್ರೆಸ್ ಕಚೇರಿ ಉದ್ಘಾಟನೆ
Published on

ಗೋಣಿಕೊಪ್ಪ: ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷ ಸದೃಢಗೊಳ್ಳುತ್ತಿದ್ದು, ಮುಂದೆಯೂ ಪಕ್ಷ ಸಂಘಟನೆ ಮತ್ತಷ್ಟು ಗಟ್ಟಿಯಾಗಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಲೋಕಸಭಾ ಚುನಾವಣಾ ಕಾರ್ಯಚಟುವಟಿಕೆ ಸಲುವಾಗಿ ಗೋಣಿಕೊಪ್ಪದಲ್ಲಿ ನೂತನ ಕಚೇರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷವೇ ಇಲ್ಲ ಎಂಬುವರಿಗೆ ಇದೀಗ ಪಕ್ಷ ಸಂಘಟನೆ ಮೂಲಕ ಸಂದೇಶ ನೀಡಲಾಗಿದೆ. ಬೂತ್ ಮಟ್ಟದ ಅಧ್ಯಕ್ಷರು ಸಕ್ರಿಯರಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಚುನಾವಣೆಗೆ ಕೆಲವೇ ದಿನಗಳು ಮಾತ್ರ ಉಳಿದಿದ್ದು, ಕಾರ್ಯಕರ್ತರು ಸಮಯವನ್ನು ವ್ಯರ್ಥ ಮಾಡದೆ ಪ್ರತಿ ಮನೆಗೆ ತೆರಳಿ ಸರ್ಕಾರದ ಯೋಜನೆಗಳನ್ನು ಮನದಟ್ಟು ಮಾಡುವ ಕೆಲಸ ಮಾಡಬೇಕು ಎಂದರು.

ಕಾಂಗ್ರೆಸ್ ಕೊಡಗು ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಗೋಣಿಕೊಪ್ಪ ಪಟ್ಟಣ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಈ ಭಾಗದಿಂದ ಹೆಚ್ಚಿನ ಮತಗಳು ಬರುವಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು ಎಂದರು.

ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪೆಮ್ಮಂಡ ಪೊನ್ನಪ್ಪ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಜಿತ್ ಅಯ್ಯಪ್ಪ, ಶಮೀರ್, ಶರತ್‌ಕಾಂತ್, ಎ.ಜೆ.ಬಾಬು, ಬಾನಂಡ ಪೃಥ್ವಿ, ಚಿನ್ನಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net