ನ್ಯಾಯಾಲಯ ಸಂಕೀರ್ಣದ ಸಂಕುಸ್ಥಾಪನೆ ನಾಳೆ

b1aaf428-57c4-4a4b-afc0-2d64e21fbb4d
Published on

ಮಡಿಕೇರಿ: ಕೊಡಗು ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಕುಶಾಲನಗರ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕುಶಾಲನಗರದಲ್ಲಿ ನೂತನ ನ್ಯಾಯಾಲಯ ಸಂಕೀರ್ಣದ ಸಂಕುಸ್ಥಾಪನೆ ಕಾರ್ಯಕ್ರಮ ಮಾ.೪ರಂದು ನೆರವೇರಲಿದೆ ಎಂದು ಕುಶಾಲನಗರ ವಕೀಲರ ಸಂಘದ ಆರ್.ಕೆ.ನಾಗೇಂದ್ರ ತಿಳಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೧.೩೦ ಗಂಟೆಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅಧ್ಯಕ್ಷತೆ ವಹಿಸಲಿದ್ದು, ಹೈಕೋರ್ಟ್ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ, ಎಂ.ಜಿ.ಶುಕುರೆ ಕಮಲ್, ಸಿ.ಎಂ.ಪೂಣಚ್ಚ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.


ಸುಮಾರು ೧೨.೫೦ ಕೋಟಿ ವೆಚ್ಚದಲ್ಲಿ ಭವ್ಯ ಕಟ್ಟಡ ನಿರ್ಮಾಣವಾಗಲಿದ್ದು, ಮುಂದಿನ ೧೧ ತಿಂಗಳ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ಸೂಚಿಸಿದೆ. ನೂತನ ೨ ಮಹಡಿಯ ಕಟ್ಟಡದಲ್ಲಿ ೨ ಕೋರ್ಟ್ ಹಾಲ್ ಇರಲಿದೆ. ಸೀನಿಯರ್ ಸಿವಿಲ್ ಜಡ್ಜ್ ಕೋರ್ಟ್ ಆಗಬೇಕೆಂಬ ಬೇಡಿಕೆಯೂ ಇದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net