ಶಿಕ್ಷಣದ ಕಡೆಗೆ ಗಮನಹರಿಸಿ: ಮಂಡ್ಯ ಸೆಂಟ್ರಲ್ ಠಾಣೆ ಪಿಎಸ್‌ಐ ವರ್ಷಾ ಕಿವಿಮಾತು

1 (4)
Published on

ಮಂಡ್ಯ: ವಿದ್ಯಾರ್ಥಿಗಳು ಅನ್ಯವಿಷಯಗಳಿಗೆ ತಲೆಕೆಡಿಸಿಕೊಳ್ಳದೆ ಶಿಕ್ಷಣದ ಕಡೆ ಗಮನಹರಿಸಿ ಎಂದು ಸೆಂಟ್ರಲ್ ಠಾಣೆ ಪಿಎಸ್‌ಐ ವರ್ಷಾ ಕಿವಿಮಾತು ಹೇಳಿದರು.

ನಗರದ ಪಿಇಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಕಳೆದ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳು ತಮ್ಮ ಪಾಲಕರು ಹಾಗೂ ಗುರುಗಳ ಗೌರವವನ್ನು ಹೆಚ್ಚಿಸುವಂತೆ ಸಾಧನೆ ಮಾಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಮಾತನಾಡಿ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಜನತಾ ಶಿಕ್ಷಣ ಟ್ರಸ್ಟ್ ಸದಾ ನಿರತವಾಗಿದೆ. ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಫಲಿತಾಂಶ ನೀಡಿ ಸಂಸ್ಥೆಯ ಘನತೆಯನ್ನು ಹೆಚ್ಚಿಸಬೇಕೆಂದು ತಿಳಿಸಿದರು.

ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಸಣ್ಣಮೊಗ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net