ಸಾಂಸ್ಕೃತಿಕ-ಕ್ರೀಡಾ ಚಟುವಟಿಕೆಗಳ ಉದ್ಘಾಟನೆ

PDJ
ವಿಜಯಪುರದ ಬಿಡಿಈ ಸಂಸ್ಥೆಯ ಪಿಡಿಜೆ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯನ್ನು ರವಿ ಬರಡಿ ನೆರವೇರಿಸಿದರು. ಕೆ.ಬಿ. ಕುಲಕರ್ಣಿ, ಎ.ಡಿ. ದೇಶಪಾಂಡೆ, ಎಂ.ಕೆ. ಕುಲಕರ್ಣಿ ಮತ್ತಿತರರಿದ್ದಾರೆ.
Published on

ವಿಜಯಪುರ: ನಗರದ ಬಿಡಿಈ ಸಂಸ್ಥೆಯ ಪಿಡಿಜೆ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ 2023-24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಸಮಾರಂಭ ನೆರವೇರಿತು.

ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಜಶೇಖರ ಬೆನಕನಹಳ್ಳಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ, ವಿದ್ಯಾರ್ಥಿಗಳು ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಂಡು ತಮ್ಮ ಆಂತರಿಕ ಹಾಗೂ ಬಾಹ್ಯ ವ್ಯಕ್ತಿತ್ವವನ್ನು ಬೆಳವಣಿಗೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ಹಿನ್ನಲೆ ಗಾಯಕ ರವಿ ಬರಡಿ ಉದ್ಘಾಟನೆ ನೆರವೇರಿಸಿದರು. ಸಂಸ್ಥೆಯ ಅಧ್ಯಕ್ಷ ಕೆ.ಬಿ. ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎ.ಡಿ. ದೇಶಪಾಂಡೆ, ಗೌರವಕಾರ್ಯದರ್ಶಿ ಎಂ.ಕೆ. ಕುಲಕರ್ಣಿ, ಜಂಟಿ ಕಾರ್ಯದರ್ಶಿ ಆರ್.ಪಿ. ಚಿಕ್ಕಲಕಿ, ಪ್ರಾಚಾರ್ಯ ಡಿ.ಕೆ. ಕುಲಕರ್ಣಿ, ವಿನಾಯಕ ಕುಲಕರ್ಣಿ ಮತ್ತಿತರರಿದ್ದರು.

ಉಪನ್ಯಾಸಕ ಎನ್.ಬಿ. ಅವಧಾನಿ ಸ್ವಾಗತಿಸಿದರು. ಎಸ್.ಪಿ. ಚವಾಣ್ ಪರಿಚಯಿಸಿದರು. ಎಸ್. ವಿ. ಕುಲಕರ್ಣಿ ನಿರೂಪಿಸಿದರು. ಎಸ್.ಕೆ. ಕನಮಡಿ. ಸಂತೋಷ ಹೆಗಡೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net