ದಸರಾ ಶಿಲ್ಪಕಲಾ ಶಿಬಿರಕ್ಕೆ ಚಾಲನೆ

Inauguration of Dasara Sculpture Camp
Published on

ಮೈಸೂರು: ನಾಡಹಬ್ಬ ದಸರಾ ಉತ್ಸವ ಪ್ರಯುಕ್ತ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಶಿಲ್ಪಕಲಾ ಶಿಬಿರಕ್ಕೆ ನಗರದ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕಲಾವಿದರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿಯಿಂದ ಪ್ರತಿ ವರ್ಷ ಶಿಬಿರ ಆಯೋಜನೆ ಮಾಡಲಾಗುತ್ತದೆ. ಅದೇ ರೀತಿ ಈ ಬಾರಿಯೂ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಆ ಮೂಲಕ ಕಲಾವಿದರಲ್ಲಿ ರುವ ಪ್ರತಿಭೆ ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದರು.

ಮೇಯರ್ ಶಿವಕುಮಾರ್ ಮಾತನಾಡಿ, ನಮ್ಮ ದೇಶ ಕಲೆಗಳಿಗೆ ಹೆಸರುವಾಸಿಯಾದ ನಾಡು. ಆದರೆ, ಇತ್ತೀಚೆಗೆ ಶಿಲ್ಪಕಲೆಯ ಕಡೆಗೆ ಆಸಕ್ತಿ ಕಡಿಮೆಯಾಗುತ್ತಿದೆ. ಹಾಗಾಗಿ ಶಿಲ್ಪಕಲೆಗೆ ಉತ್ತೇಜನ ನೀಡಲು ಶಿಬಿರ ಆಯೋಜಿಸಲಾಗಿದೆ. ಸರ್ಕಾರ ಶಿಲ್ಪಕಲೆಗೆ ಉತ್ತೇಜನ ನೀಡಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಕಲಾವಿದರು ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ವೀರಣ್ಣ ಅರ್ಕಸಾಲಿ, ಸಮಿತಿ ಉಪ ವಿಶೇಷಾಧಿಕಾರಿ ವಿಜಯ ಕುಮಾರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net